ಕುಶಾಲನಗರ, ಅ. ೧೦: ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಶಿಬಿರದಲ್ಲಿ ಪರಿಸರ ಸಂರಕ್ಷಣೆಯಲ್ಲಿ ಯುವ ಜನರ ಪಾತ್ರ ಮತ್ತು ವೈಜ್ಞಾನಿಕ ಮನೋಭಾವನೆ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಮೀಪದ ಮಿಳಿಂದ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ಪರಿಸರ ಸಂರಕ್ಷಣೆಯಲ್ಲಿ ಯುವ ಜನರ ಪಾತ್ರ ಕುರಿತು ಮಾತನಾಡಿ, ಪ್ರಕೃತಿ ಸಂರಕ್ಷಣೆಯೊAದಿಗೆ ಉತ್ತಮ ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರು ಕಾಳಜಿ ವಹಿಸಬೇಕಾಗಿದೆ ಎಂದರು.
ಪವಾಡ ರಹಸ್ಯ ಬಯಲು ಕಾರ್ಯಕ್ರಮದ ಪ್ರಾತ್ಯಕ್ಷಿಕೆ ನೆರವೇರಿಸಿಕೊಟ್ಟ ಹೆಬ್ಬಾಲೆ ಸರ್ಕಾರಿ ಪ್ರೌಢಶಾಲೆ ಅಧ್ಯಾಪಕರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್ ವೆಂಕಟನಾಯಕ್, ವೈಜ್ಞಾನಿಕ ಮನೋಭಾವನೆ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭ ಮಾತನಾಡಿದ ಕಾರ್ಯಕ್ರಮಾಧಿಕಾರಿ ಸಿ. ಮಂಜುನಾಥ್, ೭ ದಿನಗಳ ಕಾಲ ಹಮ್ಮಿಕೊಂಡಿರುವ ಶಿಬಿರದಲ್ಲಿ ೫೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಪ್ರತಿನಿತ್ಯ ವಿವಿಧ ವಿಷಯಗಳ ಉಪನ್ಯಾಸ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ರಾಷ್ಟಿçÃಯ ಭಾವೈಕ್ಯತೆ ಮನೋಭಾವನೆ ಬೆಳೆಸುವ ಬಗ್ಗೆ ವ್ಯಕ್ತಿತ್ವ ವಿಕಸನ ಉತ್ತಮ ನಾಯಕತ್ವ ಗುಣಗಳನ್ನು ರೂಪಿಸುವುದು ಸೇರಿದಂತೆ, ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಸನ್ನ ಮೂರ್ತಿ ವಹಿಸಿ ಮಾತನಾಡಿದರು. ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎನ್. ರುದ್ರಾಚಾರ್, ಮಿಳಿಂದ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಸಾವಿತ್ರಿ, ಉಪನ್ಯಾಸಕರಾದ ಎನ್.ಆರ್. ಆಶಾ, ಹೆಚ್.ಎಸ್. ರಶ್ಮಿ, ಶಿಬಿರದ ಕಾರ್ಯಕ್ರಮಾಧಿಕಾರಿ ಸಿ. ಮಂಜುನಾಥ್, ಸಹ ಶಿಬಿರಾಧಿಕಾರಿ ಎಸ್.ಎಸ್. ಅಭಿಷೇಕ್ ಮತ್ತು ಶಿಬಿರಾರ್ಥಿಗಳು ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಶಾಲಾ ಆವರಣದಲ್ಲಿ ಗಿಡವೊಂದನ್ನು ನೆಡಲಾಯಿತು. ಸಂಜೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.