ಕೂಡಿಗೆ, ಅ. ೧೦: ಕೂಡು ಮಂಗಳೂರು ಗ್ರಾಮ ಪಂಚಾಯಿತಿಯ ಸ್ವಚ್ಛೋತ್ಸವ ಹಾಗೂ ನಿತ್ಯೋತ್ಸವ ಮಾಸಿಕ ಆಚರಣೆಯ ವಿಶೇಷ ಗ್ರಾಮ ಸಭೆಯು ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸ್ವಚ್ಛ ಭಾರತ್ ಯೋಜನೆಯಡಿಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಹೊಸ ಯೋಜನೆಗಳ ಬಗ್ಗೆ ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾಹಿತಿ ಯನ್ನು ತಿಳಿಸಿದರು. ಸ್ವಚ್ಛತೆ ಕಾರ್ಯಕ್ರಮಕ್ಕೆ ಸೀಮಿತವಾಗದೆ ನಿತ್ಯೋತ್ಸವವಾಗಿ ಪ್ರತಿದಿನವೂ ಗ್ರಾಮಗಳು ಶುಚಿತ್ವ ಗೊಳ್ಳಬೇಕು ಅದರ ಮೂಲಕ ರೋಗ ರುಜನೆಗಳನ್ನ ತಡೆಗಟ್ಟುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುವುದು. ಎಲ್ಲರೂ ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಜೊತೆಯಲ್ಲಿ ಸ್ವಚ್ಛತಾ ಕಾರ್ಯಗಳಿಗೆ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್, ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು