ಮುಳ್ಳೂರು, ಅ. ೧೦: ಇತ್ತೀಚೆಗೆ ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಮೀಪದ ಆಲೂರು-ಸಿದ್ದಾಪುರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಈ ಪೈಕಿ ೧೭ ಮತ್ತು ೧೪ ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ವಸತಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡು ತಾ. ೧೦ ರಂದು ಉಡುಪಿಯಲ್ಲಿ ನಡೆಯಲಿರುವ ವಿಭಾಗಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾರೆ ಎಂದು ಆಲೂರು-ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಕೆ.ಎನ್. ಭಾರತಿ ಮತ್ತು ಶಾಲೆಯ ದೈಹಿಕ ಶಿಕ್ಷಣ ತರಬೇತಿ ಶಿಕ್ಷಕ ಅಲೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.