ಮಡಿಕೇರಿ, ಅ.೧೦: ಪೊನ್ನಂಪೇಟೆಯಲ್ಲಿ ನೆಲೆಸಿದ್ದ ಮಹಿಳೆಯೋರ್ವರು ಕಳೆದ ಒಂದು ವಾರದಿಂದ ನಾಪತ್ತೆಯಾಗಿರುವ ಸಂಬAಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾ.೩ರಂದು ಮನೆಯಿಂದ ಗಲಾಟೆ ಮಾಡಿಕೊಂಡು ಮಮತಾ (೪೭) ಎಂಬಾಕೆ ಹೋಗಿದ್ದು ಇದುವರೆಗೂ ಪತ್ತೆಯಾಗಿಲ್ಲ. ಮಮತಾ ೫.೩ಅಡಿ ಎತ್ತರ ಇದ್ದು, ಗೋದಿ ಮೈಬಣ್ಣ , ಸಾಧಾರಣ ಮೈಕಟ್ಟು , ದುಂಡು ಮುಖ ಹೊಂದಿದ್ದಾರೆ. ನಾಪತ್ತೆಯಾದ ದಿನ ನೀಲಿ ಮತ್ತು ಗುಲಾಬಿ ಬಣ್ಣದ ನೈಟಿ ಧರಿಸಿದ್ದರು. ಈಕೆ ಪತ್ತೆಯಾದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ೦೮೨೭೪-೨೪೯೦೪೪ ಗೋಣಿಕೊಪ್ಪ ವೃತ್ತ ನಿರೀಕ್ಷಕರ ಕಚೇರಿ ೦೮೨೭೪-೨೪೭೨೦೯ ಸಂಖ್ಯೆಯನ್ನು ಸಂಪರ್ಕಿಸಿ ತಿಳಿಸುವಂತೆ ಪ್ರಕಟಣೆ ತಿಳಿಸಿದೆ.