ಮಡಿಕೇರಿ, ಅ. ೧೦: ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಾಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವ ವಿದ್ಯಾನಿಲಯಗಳಲ್ಲಿ ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೋಮ, ಎಲ್ಲಾ ಬಿಎ, ಎಸ್ಸಿಸಿ, ಬಿ.ಕಾಂ, ಎಲ್ಎಲ್ಬಿ, ಪ್ಯಾರಾಮೆಡಿಕಲ್, ಬಿ.ಫಾರ್ಮ್, ನರ್ಸಿಂಗ್ ಮತ್ತಿತರ ವೃತ್ತಿಪರ ಕೋರ್ಸ್ಗಳು, ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ನೇಕಾರರ ಮಕ್ಕಳಿಗೆ ‘ವಿದ್ಯಾರ್ಥಿವೇತನ’ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯಲ್ಲಿ ಈಗಾಗಲೇ ನೇಕಾರ ಸಮ್ಮಾನ್ ಯೋಜನೆಯಡಿ ನೋಂದಾಯಿಸಲಾಗಿರುವ ಕೈಮಗ್ಗ ನೇಕಾರರು ಹಾಗೂ ಚಾಲ್ತಿಯಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳ ಸಮೀಕ್ಷೆಯಲ್ಲಿ ಗುರುತಿಸಿರುವ ನೇಕಾರರ ಮಾಹಿತಿಯನ್ವಯ ನೇಕಾರರ ಮಕ್ಕಳನ್ನು ಗುರುತಿಸಲಾಗುವುದು.
ಆದ್ದರಿಂದ ಜಿಲ್ಲೆಯ ನೋಂದಾಯಿತ ನೇಕಾರರು ಅವರ ಮಕ್ಕಳನ್ನು ಗುರುತಿಸುವ ಸಲುವಾಗಿ ಆನ್ಲೈನ್ ಮೂಲಕ ‘ಸೇವಾ ಸಿಂಧು’ ತಂತ್ರಾAಶದ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ರಲ್ಲಿ ಮಾತ್ರ ಈ ಸೇವೆ ಲಭ್ಯವಿರುತ್ತದೆ. ಅದರಂತೆ ನಿಗದಿತ ಶುಲ್ಕವನ್ನು ಪಾವತಿಸಲು ಅರ್ಜಿ ಸಲ್ಲಿಸುವುದು. ನಂತರ ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶ(ಎಸ್ಎಸ್ಪಿ)ದಲ್ಲಿ ಆನ್ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು.
ಸೇವಾ ಸಿಂಧು ಹಾಗೂ ಎಸ್ಎಸ್ಪಿ ಪೋರ್ಟಲ್ನ ಮಾಹಿತಿ ಹೊಂದಾಣಿಕೆಯಾದ ನಂತರ ಈ ಯೋಜನೆಯ ಮಾರ್ಗಸೂಚಿಯನ್ವಯ ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ(ಡಿಬಿಡಿ) ಪದ್ಧತಿಯ ಮೂಲಕ ವಿದ್ಯಾರ್ಥಿ ವೇತನದ ಮೊತ್ತವನ್ನು ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವಿಭಾಗೀಯ/ ಜಿಲ್ಲಾ ಮಟ್ಟದ ಕಚೇರಿಗಳ ಸಂಪರ್ಕಕ್ಕಾಗಿ ಇಲಾಖೆಯ ವೆಬ್ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿಜhಣ.oಡಿg ನ್ನು ವೀಕ್ಷಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಗೆ
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಡಾ. ಎಸ್.ಕೆ. ಶಿವಕುಮಾರ್ ಪ್ರಶಸ್ತಿ, ವಿಜ್ಞಾನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರೊ. ಯು.ಆರ್. ರಾವ್ ಪ್ರಶಸ್ತಿ ಮತ್ತು ಜನಸಾಮಾನ್ಯರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೩೧ ಕೊನೆ ದಿನವಾಗಿದೆ. ಕಳೆದ ವರ್ಷಗಳಲ್ಲಿ ಪ್ರಶಸ್ತಿಯ ವಿಜೇತರುಗಳ ಅರ್ಜಿ ಪರಿಗಣಿಸಲಾಗುವುದಿಲ್ಲ. ಭರ್ತಿ ಮಾಡಿದ ಅರ್ಜಿಯನ್ನು ಇ-ಮೇಲ್ ಚಿತಿಚಿಡಿಜ.ಞsಣಚಿ@gmಚಿiಟ.ಛಿom ಮತ್ತು ಪ್ರತಿಗಳನ್ನು ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಜೆಕೆವಿಕೆ ಕ್ಯಾಂಪಸ್, ಕಾಲೇಜು ಆಫ್ ಹಾರ್ಟಿಕಲ್ಚರಲ್ ಸೈನ್ಸ್ಸ್ ಎಂಟ್ರೆನ್ಸ್, ಮೇಜರ್ ಸಂದೀಪ್ ಉಣ್ಣೀಕೃಷ್ಣನ್ ರಸ್ತೆ, ದೊಡ್ಡಬೆಟ್ಟಹಳ್ಳಿ ಲೇಔಟ್ ಬಸ್ ನಿಲ್ದಾಣ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು-೫೬೦೦೯೭ ವೆಬ್ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ ದೂ. ೯೧-೮೦-೨೯೭೨೧೫೪೯-೧೫೫೦ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ. ರಮೇಶ್ ತಿಳಿಸಿದ್ದಾರೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿದ್ದು, ವಿಜ್ಞಾನ ಶಿಕ್ಷಣ ಮತ್ತು ಪ್ರಸರಣಕ್ಕೆ ಪೂರಕವಾಗುವ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ.
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ ಪದವಿ ಮಟ್ಟದಲ್ಲಿ ಡಾ. ಎಸ್.ಕೆ. ಶಿವಕುಮಾರ್ ಪ್ರಶಸ್ತಿ ಮತ್ತು ಸ್ನಾತಕೋತ್ತರ ಪದವಿ ಮಟ್ಟದಲ್ಲಿ ಪ್ರೊ. ಯು.ಆರ್. ರಾವ್ ಪ್ರಶಸ್ತಿ ನೀಡಲಾಗುತ್ತಿದೆ. ಅಲ್ಲದೇ, ಜನಸಾಮಾನ್ಯರ ಆವಿಷ್ಕಾರಗಳಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ ನೀಡಲಾಗುತ್ತಿದೆ.