ಸಿದ್ದಾಪುರ, ಅ. ೧೦: ಅಮ್ಮತ್ತಿ ಕಾರ್ಮಾಡು ಗ್ರಾಮದ ಶ್ರೀ ಕಲ್ಲುರ್ಟಿ ಪಾಷಣ ಮೂರ್ತಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವನ್ನು ವಿಜೃಂಭಣೆಯಿAದ ಆಚರಿಸಲಾಯಿತು. ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು. ವಿಜಯದಶಮಿ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚಂಡಿಕಾ ಹೋಮ ನಡೆಯಿತು. ಶ್ರೀ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು. ಈ ಸಂದರ್ಭ ಪಾಷಾಣಮೂರ್ತಿ ದೇವಸ್ಥಾನದ ಮುಖ್ಯಸ್ಥ ಕುಟ್ಟಂಡ ಮಂಜುನಾಥ್ ಹಾಗೂ ಇತರರು ಹಾಜರಿದ್ದರು.
ಸಿದ್ದಾಪುರದ ಟೀಕ್ವುಡ್ ಕಾಫಿ ತೋಟದ ಕಂಬೀರAಡ ಕುಟುಂಬಸ್ಥರ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನವರಾತ್ರಿ ಪೂಜಾ ಕಾರ್ಯಕ್ರವiಗಳು ವಿಜೃಂಭಣೆಯಿAದ ನಡೆಯಿತು. ೯ ದಿನಗಳ ಕಾಲ ನಡೆದ ವಿವಿಧ ಪೂಜಾ ಕಾರ್ಯಕ್ರಮಗಳಿಗೆ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇವಾಲಯದ ಆವರಣದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಅಲ್ಲದೇ ೯ ದಿನಗಳ ಕಾಲ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಶ್ರೀ ಚಾಮುಂಡೇಶ್ವರಿ ದೇವಾಲಯದ ಟ್ರಸ್ಟ್ನ ಮುಖ್ಯಸ್ಥರುಗಳು ಪಾಲ್ಗೊಂಡಿದ್ದರು. ಅಲ್ಲದೇ ಸಾಮೂಹಿಕ ಆಯುಧ ಪೂಜೆಯು ಸಹ ನಡೆಯಿತು.