ಮಡಿಕೇರಿ, ಅ. ೧೦: ನೆಹರೂ ಯುವ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಯುವ ಒಕ್ಕೂಟ ಮಡಿಕೇರಿ, ಬಿಳಿಗೇರಿ-ಅರುವತೋಕ್ಲು ಪೆರಾತ ಯುವಕ ಸಂಘದ ಆಶ್ರಯದಲ್ಲಿ ಸಂಘದ ಸಭಾಂಗಣದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.
ಸಂಘದ ಅಧ್ಯಕ್ಷ ಬಾಳಾಡಿ ಪ್ರತಾಪ್ ಅವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ನಿವೃತ್ತ ಸೇನಾ ಕ್ಯಾಪ್ಟನ್ ತುಂತುಜೆ ಎಸ್. ದಯಾನಂದ ಭಾಗವಹಿಸಿದ್ದರು. ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಕೆ.ಆರ್. ಶಾಲಿನಿ ದಿನದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ಸ್ವಾಗತಿಸಿ, ವಂದಿಸಿದರು.