ಮಡಿಕೇರಿ, ಅ. ೧೧: ತಾ. ೨೧ ರಂದು ಹಮ್ಮಿಕೊಂಡಿರುವ ಕಾವೇರಿ ನದಿ ಉತ್ಸವದ ಹಿನ್ನೆಲೆ ಉಸ್ತುವಾರಿ ಸಚಿವ ಬಿ.ಸಿ ನಾಗೇಶ್ ಅವರ ಅಧ್ಯಕ್ಷತೆ ಯಲ್ಲಿ ಮಡಿಕೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.
ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕಾವೇರಿ ನದಿ ಉತ್ಸವ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರಾದ ಎಂ.ಎನ್. ಚಂದ್ರಮೋಹನ್ ಮತ್ತು ರೀನಾ ಪ್ರಕಾಶ್ ಪ್ರಾಥಮಿಕ ಮಾಹಿತಿ ಒದಗಿಸಿ ಜಿಲ್ಲಾಡಳಿತದ ಸಹಕಾರ ಕೋರಿದರು. ಕಾವೇರಿ ನದಿ ಉತ್ಸವಕ್ಕೆ ಅವಶ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕಾವೇರಿ ನೀರಾವರಿ ನಿಗಮದ ಮೂಲಕ ಕಲ್ಪಿಸುವಂತೆ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಸಭೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಇಂಜಿನಿಯರ್ ವೆಂಕಟೇಶ್ ಅವರಿಗೆ ಸೂಚಿಸಿದರು. ನದಿಗೆ ಸಂಬAಧಪಟ್ಟ ೧೦ ಇಲಾಖೆಗಳು ನದಿ ಉತ್ಸವಕ್ಕೆ ಕೈಜೋಡಿಸಬೇಕೆಂದು ಸಚಿವರು ಹೇಳಿದರು.
ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ವೆಂಕಟೇಶ್ ಮಾತನಾಡಿ, ತಲಕಾವೇರಿ, ಭಾಗಮಂಡಲ, ಕುಶಾಲನಗರದಲ್ಲಿ ನಡೆಯುವ ನದಿ ಉತ್ಸವ ಕಾರ್ಯಕ್ರಮಕ್ಕೆ ನಿಗಮದ ಮೂಲಕ ಅಗತ್ಯವಿರುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಸ್ವಚ್ಛ ಕಾವೇರಿ ಅಭಿಯಾನದ ಹಿನ್ನೆಲೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಕೈಜೋಡಿಸಿ ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಲಕಾವೇರಿಯಲ್ಲಿ ತಾ. ೨೧ ರಂದು ನದಿ ಉತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭ ನದಿ ಸ್ವಚ್ಛತೆ, ಶಾಲಾ ಮಕ್ಕಳಿಂದ ಜಾಥಾ, ನಾಗರಿಕರಿಂದ ನದಿ ಸಂರಕ್ಷಣೆ ಬಗ್ಗೆ ಪ್ರಮಾಣ ವಚನ, ಭಾಗಮಂಡಲ ಸಂಗಮ ಮತ್ತು ಕುಶಾಲನಗರ ವ್ಯಾಪ್ತಿಯಲ್ಲಿ ನದಿ ತಟದಲ್ಲಿ ಗಂಗಾ ಆರತಿ ಮಾದರಿಯಲ್ಲಿ ಕಾವೇರಿಗೆ ಆರತಿ ಕಾರ್ಯಕ್ರಮ ನಡೆಯಲಿದೆ.
ನದಿ ಉತ್ಸವ ಸಂಬAಧ ಶಾಲಾ-ಕಾಲೇಜು ಮಕ್ಕಳಿಗೆ ನದಿ ವಿಷಯದಲ್ಲಿ ಪ್ರಬಂಧ ಸ್ಪರ್ಧೆಗಳು ನಡೆಯಲಿವೆ. ಸಭೆಯಲ್ಲಿ ಉಪಸ್ಥಿತರಿದ್ದ ನಿಗಮದ ಮುಖ್ಯ ಇಂಜಿನಿಯರ್ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕೋರಿದರು. ಈ ಸಂದರ್ಭ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪವಿಭಾಗಧಿಕಾರಿ ಯತೀಶ್ ಉಲ್ಲಾಳ್, ಮಡಿಕೇರಿ ತಹಶೀಲ್ದಾರ್ ಮಹೇಶ್, ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಮೋಹನ್, ಅರಣ್ಯ ಅಧಿಕಾರಿಗಳಾದ ಪೂವಯ್ಯ, ಶಿವರಾಮ್, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ವಿವಿಧ ಇಲಾಖೆ ಅಧಿಕಾರಿಗಳಾದ ವಿನಯ್, ಗೀತಾ, ಸಂಘ-ಸAಸ್ಥೆ ಪ್ರಮುಖರಾದ ಎಂ.ಬಿ. ದೇವಯ್ಯ, ರಾಬಿನ್ ದೇವಯ್ಯ, ಡಿ.ಆರ್. ಸೋಮಶೇಖರ್ ಮತ್ತಿತರರು ಇದ್ದರು.