ಕೂಡಿಗೆ, ಅ. ೧೧: ನಂಜರಾ ಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಗದ್ದೆ ಮತ್ತು ಮಾವಿನಹಳ್ಳ ಗ್ರಾಮದಲ್ಲಿ ಗಿರಿಜನ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರೂ. ೩೨ ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ಹೊಂದಿ ಕೊಂಡAತೆ ಉಪರಸ್ತೆಗಳ ನಿರ್ಮಾಣ ದಿಂದಾಗಿ ಆಯಾ ವ್ಯಾಪ್ತಿಯ ಗ್ರಾಮಸ್ಥರುಗಳ ಸಂಚಾರ ಮಾಡಲು ಅನುಕೂಲ ಕಲ್ಪಿಸಲಾಗುವುದು, ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಮೂಲಕ ಗಿರಿಜನ ಹಾಡಿಗಳ ಗ್ರಾಮೀಣ ಪ್ರದೇಶದ ಉಪ ರಸ್ತೆಗಳಿಗೆ ಕಾಂಕ್ರಿಟ್ ರಸ್ತೆ ವಿವಿಧ ಹಂತಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಈ ಸಂದರ್ಭ ನಂಜರಾಯ ಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾದ ರಕ್ಷಿತ್, ಗಿರಿಜಮ್ಮ, ಬಸವನಹಳ್ಳಿ ಲ್ಯಾಂಪ್ ಸಹಕಾರ ಸಂಘದ ಅಧ್ಯಕ್ಷ ಚಂದ್ರು, ಮಾಜಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚೆಂಗಪ್ಪ, ಯೋಜನಾ ಸಮನ್ವಯಾಧಿಕಾರಿ ಎಸ್. ನಿರ್ಮಾಣ ಮಾಡಲಾಗುತ್ತಿದೆ ಎಂದರು. ಈ ಸಂದರ್ಭ ನಂಜರಾಯ ಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾದ ರಕ್ಷಿತ್, ಗಿರಿಜಮ್ಮ, ಬಸವನಹಳ್ಳಿ ಲ್ಯಾಂಪ್ ಸಹಕಾರ ಸಂಘದ ಅಧ್ಯಕ್ಷ ಚಂದ್ರು, ಮಾಜಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚೆಂಗಪ್ಪ, ಯೋಜನಾ ಸಮನ್ವಯಾಧಿಕಾರಿ ಎಸ್. ಶಾಸಕರ ಆಪ್ತ ಕಾರ್ಯದರ್ಶಿ ರವಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.