ಸೋಮವಾರಪೇಟೆ, ಅ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾ. ೧೨ ರಂದು ಬೆಳಿಗ್ಗೆ ೧೧ಕ್ಕೆ ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ನವಜೀವನ ಸಮಿತಿ ಸದಸ್ಯರ ಸಮಾವೇಶ ನಡೆಯಲಿದೆ ಎಂದು ಯೋಜನಾಧಿಕಾರಿ ಎಚ್. ರೋಹಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ವಹಿಸಲಿದ್ದಾರೆ. ಜಿಲ್ಲಾ ಜನಜಾಗೃತಿ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ಯೋಜನೆ ಸೌಲಭ್ಯ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ತಹಶೀಲ್ದಾರ್ ಎಸ್.ಎನ್. ನರಗುಂದ್, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.