ಕೂಡಿಗೆ, ಅ. ೧೧: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಪೊನ್ನಂಪೇಟೆಯಲ್ಲಿ ನಡೆದ ಜಿಲ್ಲಾಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕೂಡಿಗೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಸ್. ಭೀಮಾಶಂಕರ್ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಪ್ರಾಂಶುಪಾಲ ಡಾ. ಬಸಪ್ಪ ತಿಳಿಸಿದ್ದಾರೆ.