ಸೋಮವಾರಪೇಟೆ, ಅ. ೧೩: ಮೈಸೂರು ವಿಶ್ವವಿದ್ಯಾಲಯ, ಹೊಳೆನರಸೀಪುರ ಪಡವಲಹಿಪ್ಪೆ ಹೆಚ್.ಡಿ. ದೇವೆಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ಅಧ್ಯಯನ ವಿಭಾಗ, ಕೊಡಗು ನಾವು ಪ್ರತಿಷ್ಠಾನ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ತಾಲೂಕಿನ ಪುಷ್ಪಗಿರಿ ಶ್ರೀ ಶಾಂತಮಲ್ಲಿಕಾರ್ಜುನ ದೇವಾಲಯ ಸಮುದಾಯ ಭವನದಲ್ಲಿ ಆಯೋಜಿಸಿರುವ ಹತ್ತು ದಿನದ ಸಮಾಜ ಕಾರ್ಯ ಶಿಬಿರದಲ್ಲಿ ಕಾಫಿ ಬೆಳೆ ಕುರಿತ ಕಾರ್ಯಾಗಾರ ನಡೆಯಿತು.
ಕಾಫಿ ಮಂಡಳಿಯ ವಿಸ್ತರಣಾ ಅಧಿಕಾರಿ ಲಕ್ಷಿö್ಮÃಕಾಂತ್ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾಹಿತಿ ನೀಡಿದರು. ದೇಶದಲ್ಲಿ ಕಾಫಿ ಹುಟ್ಟು, ಬೆಳವಣಿಗೆ ಮತ್ತು ಕಾಫಿ ತೋಟಗಳಿಂದ ಪರಿಸರಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಸಂಜೀವ್ಕುಮಾರ್, ಶಾಕುಂತಲ, ನಾವು ಪ್ರತಿಷ್ಠಾನ ಸಂಸ್ಥಾಪಕ ಗೌತಮ್ ಕಿರಗಂದೂರು ಹಾಗೂ ಕಾಫಿ ಮಂಡಳಿಯ ಸಹಾಯಕ ವಿಸ್ತರಣಾಧಿಕಾರಿ ಕೃಷ್ಣಮೂರ್ತಿ ಇದ್ದರು.