ಗೋಣಿಕೊಪ್ಪಲು, ಅ. ೧೩: ಗ್ರಾಮಸ್ಥರ ಬಹು ಬೇಡಿಕೆಯಾಗಿದ್ದ ಬಿಟ್ಟಂಗಾಲ- ಕೂಟಿಯಾಲ ರಸ್ತೆ ಅಭಿವೃದ್ಧಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ರುದ್ರಗುಪ್ಪೆ ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗದಲ್ಲಿ ಗ್ರಾಮಸ್ಥರು ಆಯೋಜಿಸಿದ್ದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್‌ನ ಅಡಿಯಲ್ಲಿ ಜಿಲ್ಲೆಯ ಹಲವು ರಸ್ತೆಗಳ ಅಭಿವೃದ್ಧಿಗೆ ರೂ. ೫೦ ಲಕ್ಷ ಅನುದಾನವು ಲಭಿಸಿತ್ತು. ಈ ಅನುದಾನದಲ್ಲಿ ಬಿಟ್ಟಂಗಾಲ - ಕೂಟಿಯಾಲ ೮ ಕಿ.ಮೀ. ರಸ್ತೆಗೆ ರೂ. ೨ ಕೋಟಿ ಅನುದಾನವನ್ನು ನೀಡಲಾಗಿದೆ.

ಗ್ರಾಮಸ್ಥರು ಗುಣಮಟ್ಟದ ಕಾಮಗಾರಿಯನ್ನು ಮಾಡಿಕೊಳ್ಳುವಂತೆ ಸಲಹೆ ನೀಡಿದರು. ರಸ್ತೆಯ ಬದಿಯಲ್ಲಿ ಚರಂಡಿಗಳನ್ನು, ಬೇಲಿಗಳನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ರಸ್ತೆ ಅಗಲೀಕರಣಕ್ಕೆ ಬೇಲಿಯ ಸಮಸ್ಯೆ ಕಂಡುಬAದರೆ ತಾವುಗಳೇ ಸ್ವಯಂ ಪ್ರೇರಿತರಾಗಿ ತೆರವುಗೊಳಿಸಿ, ಅಭಿವೃದ್ಧಿಗೆ ಕೈ ಜೋಡಿಸಬೇಕು. ಈ ಹಿಂದೆ ಇದ್ದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ತರಲಾಗಿದೆ. ಇನ್ನಷ್ಟು ರಸ್ತೆ ಅಭಿವೃದ್ಧಿ ಮುಂದಿನ ದಿನದಲ್ಲಿ ಕೈಗೆತ್ತಿಕೊಳ್ಳಲು ಅನುದಾನ ಒದಗಿಸ ಲಾಗುವುದು. ಮಳೆ ಹಿನ್ನೆಲೆಯಲ್ಲಿ ಹಲವು ರಸ್ತೆಗಳು ಹಾಳಾಗಿದ್ದು ಮುಂದಿನ ದಿನದಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಬಿಟ್ಟAಗಾಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಅಪ್ಪಂಡೇರAಡ ದಿನು ದೇವಯ್ಯ ಮಾತನಾಡಿ, ಬಿಟ್ಟಂಗಾಲ-ಕೂಟಿಯಾಲ ರಸ್ತೆಯ ಅಭಿವೃದ್ಧಿಗೆ ಶಾಸಕರನ್ನು ಹಿಂದೆ ಗ್ರಾಮಸ್ಥರ ಪರವಾಗಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಮನವಿಯ ಹಿನೆÀ್ನಲೆಯಲ್ಲಿ ಶಾಸಕ ಕೆ.ಜಿ. ಬೋಪಯ್ಯ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಮೊದಲ ಹಂತದಲ್ಲಿ ಎರಡು ಕೋಟಿ ಅನುದಾನ ಬಿಡುಗಡೆಗೊಳಿಸಿ ದ್ದಾರೆ. ರಸ್ತೆಯ ಎರಡು ಬದಿಯಲ್ಲಿ ಅಗಲೀಕರಣಗೊಳ್ಳಲಿದ್ದು ೮ ಕಿ.ಮೀ. ರಸ್ತೆಯನ್ನು ಸಂಪೂರ್ಣ ಅಭಿವೃದ್ಧಿ ಪಡಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ. ಮುಂದೆಯೂ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಗ್ರಾಮದ ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಕಾಮಗಾರಿ ನಡೆಯುತ್ತಿರುವ ವೇಳೆ ವಾಹನಗಳು ಓಡಾಟ ಮಾಡದಂತೆ ಎಚ್ಚರ ವಹಿಸಿದ್ದಲ್ಲಿ ಗುಣಮಟ್ಟದ ರಸ್ತೆ ಕಾಮಗಾರಿಯೂ ನಡೆಯಲಿದೆ. ಈ ಬಗ್ಗೆ ಗ್ರಾಮಸ್ಥರು ಹೆಚ್ಚಿನ ನಿಗಾ ವಹಿಸುವಂತೆ ಮನವಿ ಮಾಡಿದರು.

ಬಿಜೆಪಿ ಪಕ್ಷದ ಮುಖಂಡ ತೀತಿಮಾಡ ಲಾಲಾ ಭೀಮಯ್ಯ ಮಾತನಾಡಿ, ಮಳೆಯ ಹಿನೆÀ್ನಲೆಯಲ್ಲಿ ರಸ್ತೆಗಳು ಹಾಳಾಗಿ ಜನರ ಓಡಾಟಕ್ಕೆ ಸಮಸ್ಯೆ ಉಂಟಾಗಿತ್ತು. ಈ ವೇಳೆ ಶಾಸಕರನ್ನು ಗ್ರಾಮದ ಮುಖಂಡರು ಭೇಟಿ ಮಾಡಿ ವಸ್ತು ಸ್ಥಿತಿಯನ್ನು ವಿವರಿಸಲಾಗಿತ್ತು. ಈ ವೇಳೆ ಉತ್ತಮ ಅನುದಾನ ನೀಡುವ ಭರವಸೆ ನೀಡಿದ್ದರು. ನೀಡಿದ ಭರವಸೆಯಂತೆ ಇದೀಗ ಶಾಸಕರು ರಸ್ತೆ ಅಭಿವೃದ್ಧಿಗೆ ರೂ. ೨ ಕೋಟಿ ಅನುದಾನವನ್ನು ನೀಡುವ ಮೂಲಕ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಸದಸ್ಯ ಮೂಕಚಂಡ ಪ್ರಸನ್ನ ಸುಬ್ಬಯ್ಯ ಮಾತನಾಡಿ, ಗ್ರಾಮೀಣ ಭಾಗದ ರಸ್ತೆಗೆ ಒತ್ತು ನೀಡಿದ ಶಾಸಕ ಕೆ.ಜಿ. ಬೋಪಯ್ಯ ಅವರು ಮೊದಲ ಹಂತದಲ್ಲಿ ರೂ. ೨ ಕೋಟಿ ಅನುದಾನ ನೀಡಿದ್ದಾರೆ. ಉಳಿದ ಕಾಮಗಾರಿ ನಡೆಸಲು ಅನುದಾನದ ಬೇಡಿಕೆಯನ್ನು ಶಾಸಕರ ಮುಂದಿಡಲಾಗಿದೆ. ಮುಂದಿನ ಹಂತದಲ್ಲಿ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ನಾಮೇರ ಬಿ. ನವೀನ್, ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ, ಬಿ. ಶೆಟ್ಟಿಗೇರಿಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷ ಗಿರೀಶ್, ಬಿ. ಶೆಟ್ಟಿಗೇರಿ ಶಕ್ತಿ ಕೇಂದ್ರದ ಪ್ರಮುಖ್ ವಿಜು ಕುಶಾಲಪ್ಪ, ಜಿ.ಪಂ. ಮಾಜಿ ಅಧ್ಯಕ್ಷೆ ಅಪ್ಪಂಡೇರAಡ ಭವ್ಯ, ರುದ್ರಗುಪ್ಪೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಾಸು ಮುದ್ದಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸಿದ್ದೇಗೌಡ, ಶಾಸಕರ ಆಪ್ತ ಸಹಾಯಕ ಮಲ್ಲಂಡ ಮಧು ಸೇರಿದಂತೆ ಗ್ರಾಮದ ಹಿರಿಯರು, ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಿದ್ದರು.

-ಹೆಚ್.ಕೆ ಜಗದೀಶ್