ಭಾಗಮಂಡಲ, ಅ. ೧೨: ತಾ. ೧೭ ರಂದು ಭಾಗಮಂಡಲ, ತಲಾ ಕಾವೇರಿ ತೀರ್ಥ ಉದ್ಭವ ಹಿನ್ನೆಲೆ ವೀರಾಜಪೇಟೆ ತಾಲೂಕಿನ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಲಕಾವೇರಿ ಯಿಂದ ಭಾಗಮಂಡಲವರೆಗೆ ರಸ್ತೆ ಬದಿಯ ಕಸ ಸಂಗ್ರಹಿಸಿ ಸ್ವಚ್ಛತೆ ಮಾಡಲಾಯಿತು.

ಕಾರ್ಯಕ್ರಮಕ್ಕೆ ಪಶ್ಚಿಮ ಘಟ್ಟಗಳ ಕಾರ್ಯಪಡೆ ಮಾಜಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ತಲಕಾವೇರಿಯಲ್ಲಿ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಭಾಗಮಂಡಲದಿAದ ತಲಕಾವೇರಿವರೆಗೆ ಏಳು ಕಿಲೋ ಮೀಟರ್ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ತಲಾ ಕಾವೇರಿ ಯನ್ನು ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದ ಬಹುತೇಕ ಜನರು ಅವಲಂಬಿಸಿದ್ದಾರೆ ಎಂದರು.

ಸ್ಥಳೀಯ ಶಾಸಕ ಕೆ.ಜಿ. ಬೋಪಯ್ಯ ವಾಹನ ವ್ಯವಸ್ಥೆ ಮಾಡಿರುವುದಾಗಿ ಹೇಳಿದರು.

ಈ ಸಂದರ್ಭ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ಬೋಜಪ್ಪ, ಪ್ರ‍್ರಧಾನ ಕಾರ್ಯದರ್ಶಿ ಶಿಲ್ಪ, ರತಿ ಅಚ್ಚಪ್ಪ, ರಾಜ್ಯ ಕೃಷಿ ಮೋರ್ಚಾದ ಸದಸ್ಯೆ ಯಮುನಾ ಚಂಗಪ್ಪ, ಜಿಲ್ಲಾ ಮಹಿಳಾ ಮೋರ್ಚಾದ ಸದಸ್ಯೆ ಸುಶೀಲಾ ಅಶೋಕ್, ಮಹಿಳಾ ಮೋರ್ಚಾದ ಸದಸ್ಯೆಯರು ಇದ್ದರು. ಮಡಿಕೇರಿ ಮೂಡಾ ಮಾಜಿ ಅಧ್ಯಕ್ಷ ರಮೇಶ್ ಹೊಳ್ಳ, ಯಮುನಾ ಚಂಗಪ್ಪ, ಅಯ್ಯಂಗೇರಿ ಗ್ರಾ.ಪಂ. ಅಧ್ಯಕ್ಷ ಕುಯ್ಯಮುಡಿ ರಂಜು, ಶಕ್ತಿ ಕೇಂದ್ರ ಪ್ರಮುಖ ರಾಜೀವ್, ಎಸ್ಟಿ ಮೋರ್ಚಾದ ಅಧ್ಯಕ್ಷ ಮಿಟ್ಟು ರಂಜಿತ್, ಸೇರಿದಂತೆ ಇತರ ಪ್ರಮುಖರು ಪಾಲ್ಗೊಂಡಿದ್ದರು.

-ಸುನಿಲ್, ಸುಧೀರ್