*ಗೋಣಿಕೊಪ್ಪ, ಅ. ೧೩: ತಿತಿಮತಿ ಗ್ರಾಮ ಪಂಚಾಯಿತಿಯ ೨ನೇ ಅವಧಿಯ ಅಧ್ಯಕ್ಷರಾಗಿ ಕೆ. ಸರಸ್ವತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಿತಿಮತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸದಸ್ಯರ ಒಮ್ಮತದ ನಿರ್ಧಾರದಂತೆ ಬಹುಮತ ಸಾಬೀತುಪಡಿಸಿದ ಹಿನ್ನೆಲೆ ಸರಸ್ವತಿಯವರು ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪಕ್ಷದ ಮುಖಂಡರ ಒಡಂಬಡಿಕೆಯAತೆ ಒಂದೂವರೆ ವರ್ಷಕ್ಕೆ ಅಧ್ಯಕ್ಷರ ಬದಲಾವಣೆ ಎಂಬAತೆ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಪುಟ್ಟಸ್ವಾಮಿ ರಾಜೀನಾಮೆ ನೀಡಿದ ಕಾರಣ ಮುಂದಿನ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾಧಿಕಾರಿ ತಾಲೂಕು ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಗುರುಶಾಂತಪ್ಪ ಕಾರ್ಯನಿರ್ವಹಣೆಯಲ್ಲಿ ಚುನಾವಣೆ ನಡೆಸಲಾಯಿತು.
ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ಜಿಲ್ಲಾ ಖಜಾಂಚಿ ಚೆಪುö್ಪಡೀರ ಮಾಚು, ಉಪಾಧ್ಯಕ್ಷೆ ವಿಜಯ, ಸದಸ್ಯರುಗಳಾದ ಎನ್.ಎನ್. ಅನೂಪ್‌ಕುಮಾರ್, ಶಂಕರ, ಆಶಾ, ಶೇಖರ, ಪೊನ್ನು, ರಾಜೇಶ್ವರಿ, ಶ್ಯಾಮಲ, ಚುಬ್ರು, ಅಪ್ರೋಸ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರವಿ ಮೆಟ್ಟಲಕೋಡ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.