ಕುಶಾಲನಗರ, ಅ. ೧೨: ನದಿ, ಪ್ರಕೃತಿ ಬಗ್ಗೆ ಪ್ರತಿಯೊಬ್ಬರು ಅಗತ್ಯವಾಗಿ ಕಾಳಜಿ ತೋರುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕಾಗಿದೆ ಎಂದು ಶ್ರೀ ಚೌಡೇಶ್ವರಿ ದೇವಾಲಯ ಸಮಿತಿ ಕಾರ್ಯದರ್ಶಿ ಡಿ. ವಿರಾಜೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಚೌಡೇಶ್ವರಿ ದೇವಾಲಯ ಆಡಳಿತ ಮಂಡಳಿ ಸಹಯೋಗದೊಂದಿಗೆ ನಡೆದ ೧೩೬ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅರ್ಚಕ ಕೃಷ್ಣಮೂರ್ತಿ ಭಟ್ ಅವರು, ಅಷ್ಟೋತ್ತರ, ಅರ್ಚನೆ ನೆರವೇರಿಸಿದರು. ಸುರಿಯುತ್ತಿದ್ದ ಮಳೆ ನಡುವೆ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಚೌಡೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ ಸುಲೋಚನಾ ಅವರ ನೇತೃತ್ವದಲ್ಲಿ ಮಹಿಳೆಯರು ನದಿಗೆ ಬಾಗಿನ ಅರ್ಪಿಸಿ, ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಟಿ. ವಿಜಯೇಂದ್ರ, ಡಿ.ಆರ್. ಸೋಮ ಶೇಖರ್, ಬಳಗದ ಪ್ರಮುಖರಾದ ಮಂಡೆಪAಡ ಬೋಸ್ ಮೊಣ್ಣಪ್ಪ, ಚೈತನ್ಯ ಚಂದ್ರಮೋಹನ್, ಪದ್ಮ ಪುರುಷೋತ್ತಮ್ ಮತ್ತಿತರರು ಇದ್ದರು.