ಮಡಿಕೇರಿ, ಅ. ೧೨: ಜಿಲ್ಲಾಧಿಕಾರಿ
ಡಾ. ಬಿ.ಸಿ. ಸತೀಶ ಅವರ ಕಾಲಿನ ಮೂಳೆಗೆ ಪೆಟ್ಟಾಗಿದ್ದು, ಈ ಕಾರಣದಿಂದಾಗಿ ಅವರು ಕೆಲವು ದಿನಗಳ ಕಾಲದ ವಿಶ್ರಾಂತಿಯಲ್ಲಿದ್ದಾರೆ. ತಮ್ಮ ದೈನಂದಿನ ಕೆಲಸ ಕಾರ್ಯದೊಂದಿಗೆ ಕ್ರೀಡಾ ಚಟುವಟಿಕೆ, ಇತ್ತೀಚೆಗೆ ತಾನೆ ಮುಕ್ತಾಯಗೊಂಡ ದಸರಾದ ಎಲ್ಲ ಕಾರ್ಯಕ್ರಮಗಳಲ್ಲೂ ಕೂಡ ಇವರು ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ನಾಲ್ಕು ದಿನಗಳ ಹಿಂದೆ ಸತೀಶ ಅವರು ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ ಕಾಲಿನ ಮೂಳೆಗೆ ಪೆಟ್ಟಾಗಿದ್ದು, ತಾ. ೨೪ರ ವರೆಗೆ ರಜೆಯಲ್ಲಿದ್ದಾರೆ. ರಜೆ ಹಿನ್ನೆಲೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರಿಗೆ ಪ್ರಬಾರವಾಗಿ ಅಧಿಕಾರ ನೀಡಲಾಗಿದೆ. ಈ ಕಾರಣದಿಂದಾಗಿ ಕೆಲ ದಿನಗಳು ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ಸಿಗುವುದಿಲ್ಲ. ಅಲ್ಲದೆ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿದು ಬಂದಿದೆ.