ಮಡಿಕೇರಿ, ಅ. ೧೨: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾ. ೧೫ ರಂದು ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರ ಹೋಬಳಿಯ ಹೊಸಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ತಿಳಿಸಿದ್ದಾರೆ.
ಈ ಹಿಂದೆ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ನಿಟ್ಟೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಗದಿಯಾಗಿತ್ತು, ಆದರೆ ಕುಶಾಲನಗರ ಹೋಬಳಿಯ ಹೊಸಪಟ್ಟಣದಲ್ಲಿ ಈ ಬಾರಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.