ಮಡಿಕೇರಿ, ಅ.೧೪: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಸಹಕಾರ ನೀಡುವಂತೆ ಕೋರಿ ಸಂಸದ ಪ್ರತಾಪ್ ಸಿಂಹರಿಗೆ ಕೊಡಗು ರಕ್ಷಣಾ ವೇದಿಕೆಯ ನಿಯೋಗ ಮನವಿ ಸಲ್ಲಿಸಿದೆ.

ಕೊರವೇ ಅಧ್ಯಕ್ಷ ಅಚ್ಚಂಡಿರ ಪವನ್ ಪೆಮ್ಮಯ್ಯ ಅವರ ನೇತೃತ್ವದಲ್ಲಿ ಸಂಸದರನ್ನು ಭೇಟಿಯಾದ ನಿಯೋಗ ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿತು.

ಕೊಡಗು ಮತ್ತು ಮೈಸೂರು ಕ್ಷೇತ್ರದ ಸಂಸದರಾಗಿರುವ ತಮ್ಮಿಂದ ಕೊಡಗಿನ ಜನ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಬಯಸುತ್ತಿದ್ದಾರೆ. ಮೈಸೂರು ಕ್ಷೇತ್ರ ತಮ್ಮ ನೇತೃತ್ವದಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಶ್ಲಾಘನೀಯ. ಇದೇ ಮಾದರಿಯಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೂ ಕೈಜೋಡಿಸಬೇಕೆಂದು ಪವನ್ ಪೆಮ್ಮಯ್ಯ ಮನವಿ ಮಾಡಿದರು.

ಕೊಡಗಿನ ಜನರ ಹಲವು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಆದ್ಯತೆ ನೀಡಬೇಕು. ಹುಲಿ ಮತ್ತು ಕಾಡಾನೆ ದಾಳಿ ಮಿತಿ ಮೀರಿದ್ದು, ಕೇಂದ್ರ ಸರ್ಕಾರದ ಬಳಿ ವ್ಯವಹರಿಸಿ ಶಾಶ್ವತ ಪರಿಹಾರ ಘೋಷಿಸಬೇಕು. ಕೊಡಗಿನ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು, ಸರ್ವಋತು ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು ಎಂದರು.

ಕೊಡಗಿನ ಪ್ರವಾಸೋದ್ಯಮ ಕ್ಷೇತ್ರ ಯುವ ಸಮೂಹಕ್ಕೆ ಉದ್ಯೋಗವನ್ನು ಸೃಷ್ಟಿಸುತ್ತಿದೆ. ಆದರೆ ಜಿಲ್ಲೆಯ ಪ್ರವಾಸಿತಾಣಗಳು ಯಾವುದೇ ಅಭಿವೃದ್ಧಿಯನ್ನು ಕಾಣುತ್ತಿಲ್ಲ. ಪ್ರಚಾರದಲ್ಲಷ್ಟೇ ಪ್ರವಾಸಿತಾಣಗಳನ್ನು ಕೊಂಡಾಡಲಾಗುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರಿಗೆ ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಲ್ಲ. ಆದ್ದರಿಂದ ಹೈಟೆಕ್ ಮಾದರಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಂಸದರು ಕ್ರಮ ಕೈಗೊಳ್ಳಬೇಕು.

ಕೊಡಗಿನ ಮೂಲಕ ಹಾದು ಹೋಗುವ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಬದಿಯ ಕಾಡು ಕಡಿದು ನಿರ್ವಹಣೆ ಮಾಡಲು ಸಂಬAಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು. ಮಡಿಕೇರಿ ಮತ್ತು ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೈಲ್ವೆ ಟಿಕೆಟ್ ಸೆಂಟರ್ ನ್ನು ಕಳೆದ ಎರಡು ವರ್ಷಗಳಿಂದ ಮುಚ್ಚಲಾಗಿದೆ. ಇದರಿಂದ ಜಿಲ್ಲೆಯ ಜನ ಹಾಗೂ ಹೊರ ಭಾಗದ ಕಾರ್ಮಿಕ ವರ್ಗಕ್ಕೆ ಕಷ್ಟವಾಗಿದೆ. ರೈಲು ಮಾರ್ಗವಿಲ್ಲದ ಕೊಡಗಿಗೆ ಟಿಕೆಟ್ ಸೆಂಟರ್ ಕೂಡ ಇಲ್ಲದಾಗಿದ್ದು, ಈ ಬಗ್ಗೆ ತಾವು ಗಮನ ಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

ಕೊರವೇಯ ಎಲ್ಲಾ ಹೋಬಳಿ ಘಟಕಗಳ ಅಧ್ಯಕ್ಷರುಗಳು, ಮೈಸೂರು ಜಯಲಕ್ಷಿö್ಮ ಪುರಂ ಕೊಡವ ಸಮಾಜದ ಪ್ರಮುಖರು, ಉದ್ಯಮಿಗಳಾದ ಪಂದ್ಯAಡ ಅನಿಲ್ ಕಾರ್ಯಪ್ಪ, ಜಮ್ಮಡ ಗಣೇಶ್ ಅಯ್ಯಣ್ಣ, ಕಾಯಪಂಡ ವಿಷ್ಣು ನಾಚಪ್ಪ ಮತ್ತಿತರರು ನಿಯೋಗದಲ್ಲಿದ್ದರು.