ಮಡಿಕೇರಿ ಅ.೧೪ : ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಉಳಿವಿಗೆ ಹಲವು ಪ್ರಯತ್ನ ಮಾಡಲಾಗಿದೆ. ಮುಂದಿನ ತಲೆಮಾರಿಗೆ ಅರೆಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಅಡಿಪಾಯ ಹಾಕಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಾಲ್ಕನೇ ಅಧ್ಯಕ್ಷರ ಮೂರು ವರ್ಷದ ಅವಧಿಯು ಅಕ್ಟೋಬರ್ ೧೫ (ಇಂದಿಗೆ) ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಅಕಾಡೆಮಿ ವತಿಯಿಂದ ಹೊರ ತರಲಾಗಿರುವ ‘ಅರೆಭಾಷೆ ಅಕಾಡೆಮಿ ಸಾಧನೆಯ ಹಾದಿ’ ಪುಸ್ತಕ ಬಿಡುಗಡೆ ಹಾಗೂ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳೆದ ಮೂರು ವರ್ಷದಲ್ಲಿ ಹಲವು ಯೋಜನೆ ರೂಪಿಸಿ, ಕಾರ್ಯಕ್ರಮ ನಿರ್ವಹಿಸಲಾಗಿದೆ. ಪ್ರತಿಯೊಬ್ಬ ಸದಸ್ಯರು ತಮ್ಮ ಪಾಲಿನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಕಾರ್ಯಕ್ರಮ ಅನುಷ್ಠಾನಕ್ಕೆ ಕೈಜೋಡಿಸಿದ್ದಾರೆ. ಅರೆಭಾಷೆ ಅಕಾಡೆಮಿಯ ಪುಸ್ತಕಗಳ ಡಿಜಿಟಲೀಕರಣ ಮಾಡಲು ಶ್ರಮಿಸಲಾಗಿದೆ. ಅರೆಭಾಷೆಯಲ್ಲಿ ದೃಶ್ಯಮಾದ್ಯಮ ಕಾರ್ಯಾಗಾರ ಏರ್ಪಡಿಸಲು ಉದ್ದೇಶಿಸಲಾಗಿತ್ತು, ಆದರೆ ಸಾಧ್ಯವಾಗಲಿಲ್ಲ ಹೇಳಿದರು. ಅರೆ ಭಾಷೆಯನ್ನು ಉಳಿಸಿ ಕೊಳ್ಳಬೇಕೆಂದರೆ ಬರವಣಿಗೆ ಮೂಲಕ ದಾಖಲೀಕರಣವಾಗಬೇಕು, ಸಂಸ್ಕೃತಿಯನ್ನು ಮೈಗೂಡಿಸಿ ಕೊಳ್ಳಬೇಕು. ಹೊಸ ತಲೆಮಾರಿನವರು ಸಾಹಿತ್ಯ ಹಾಗೂ ಸಂಸ್ಕೃತಿಯಿAದ ದೂರ ಸರಿಯುತ್ತಿರುವದೇ ಒಂದು ಸವಾಲಾಗಿದೆ. ಮನೆಗಳಲ್ಲಿ ನಮ್ಮ ಭಾಷೆಯಲ್ಲಿ ಮಾತನಾಡುವ ಮೂಲಕ ಬೆಳೆಸಬೇಕೆಂದರು. ಅರೆಭಾಷೆ ಸಂಶೋಧನಾ ಕೇಂದ್ರದ ಮೂಲಕ ಅರೆಭಾಷೆಯನ್ನು ಪಠ್ಯದಲ್ಲಿ ಅಳವಡಿಸುವ ಕಾರ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದ್ದು, ಮುಂದಿನ ದಿನಗಳಲ್ಲಿ ನಿರಂತರ ಪ್ರಯತ್ನ ಪಟ್ಟರೆ ಸಾಧ್ಯವಾಗಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅರೆಭಾಷೆಯಲ್ಲಿ ಬರವಣಿಗೆಗಳು ಹೆಚ್ಚಾಗಬೇಕು, ಬರೆಯುವವರ ಬರಹಗಳನ್ನು ಸಂಗ್ರಹಿಸಿ ಹಿಂಗಾರ ತ್ರೆöÊಮಾಸಿಕ ಸಂಚಿಕೆ ತರಲಾಗಿದ್ದು, ಅದರ ಚಂದಾದಾರರ ಸಂಖ್ಯೆ ೧೬೮೦ಕ್ಕೆ ಏರಿದೆ. ಬರಹಗಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಿತ ಬರಹಗಳನ್ನು ಒಗ್ಗೂಡಿಸಿ ಪುಸ್ತಕ ಹೊರತರಲಾಗಿದೆ. ಹೊಸ ಪೀಳಿಗೆಯವರು ಸಾಹಿತ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಲಾಗಿದೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಸಾಧನೆಯ ಹಾದಿ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ; ಅರೆಭಾಷೆ ಅಕಾಡೆಮಿಯ ನಾಲ್ಕನೇ ಅವಧಿಯ ಅಧ್ಯಕ್ಷರಾಗಿ ಲಕ್ಷಿö್ಮÃನಾರಾಯಣ ಕಜೆಗದ್ದೆ ಅವರು ಯೋಜನೆ ರೂಪಿಸಿ ತಂಡವಾಗಿ ಕಾರ್ಯ ನಿರ್ವಹಿಸಿದ್ದಾರೆ. ಯಾವುದೇ ನಿರೀಕ್ಷೆಗಳಿಲ್ಲದೆ ಅಕಾಡೆಮಿ ಅಧ್ಯಕ್ಷರಾದಲ್ಲಿ ಸಾಧನೆ ಮಾಡಲು ಸಾಧ್ಯ ಎಂಬುದನ್ನು ತಿಳಿಸಿದ್ದಾರೆ ಎಂದರು.
(ಮೊದಲ ಪುಟದಿಂದ) ನಾವೇನೂ ಮಾಡಿದ್ದೇವೆ ಎಂದು ಹೇಳುವುದಕ್ಕಿಂತ, ಅಧ್ಯಕ್ಷರು ಮತ್ತು ತಂಡದ ಕೆಲಸಗಳನ್ನು ಜನರು ಮಾತನಾಡುವಂತಿರಬೇಕು. ಆ ದಿಸೆಯಲ್ಲಿ ಅರೆಭಾಷೆ ಅಕಾಡೆಮಿಯ ಅಧ್ಯಕ್ಷರು ಅವಿರತ ಸೇವೆ ಸಲ್ಲಿಸಿದ್ದಾರೆ. ಪರಿಪೂರ್ಣ ಕೆಲಸ ಮಾಡುವಲ್ಲಿ ದುಡಿದಿದ್ದಾರೆ,
ಕನ್ನಡ ಸುವರ್ಣ ಸಮುಚ್ಚಯ ಭವನ ಶೀಘ್ರ ಉದ್ಘಾಟನೆಯಾಗಿ ಭವನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುವಂತಾಗಲಿ ಎಂದು ಆಶಿಸಿದರು.
ಅರೆಭಾಷೆ ಅಕಾಡೆಮಿಯ ರಿಜಿಸ್ಟಾçರ್ ಚಿನ್ನಸ್ವಾಮಿ ಮಾತನಾಡಿ ಅಕಾಡೆಮಿ ವತಿಯಿಂದ ಅರೆಭಾಷೆ ಪದಕೋಶ, ಪಾರಂಪರಿಕ ವಸ್ತುಕೋಶ, ವಿಶ್ವಕೋಶ ಹೀಗೆ ಹಲವು ಪುಸ್ತಕಗಳನ್ನು ಪ್ರಕಟಿಸಿರುವುದು ವಿಶೇಷವಾಗಿದೆ ಎಂದರು.
ಅಕಾಡೆಮಿ ಸದಸ್ಯ ಡಾ.ವಿಶ್ವನಾಥ್ ಬದಿಕಾನ ಅವರು ಕಳೆದ ಮೂರು ವರ್ಷದ ಅಕಾಡೆಮಿ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.
ಅಕಾಡೆಮಿ ಸದಸ್ಯರಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಸ್ಮಿತಾ ಅಮೃತರಾಜ್, ಚೊಕ್ಕಾಡಿ ಪ್ರೇಮ ರಾಘವಯ್ಯ, ಧನಂಜಯ ಅಗೋಳಿಕಜೆ, ಡಾ.ದಯಾನಂದ ಕೂಡಕಂಡಿ, ಎ.ಟಿ.ಕುಸುಮಾಧರ, ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ, ಪುರುಷೋತ್ತಮ ಕಿರ್ಲಾಯ, ಡಾ.ಪುರುಷೋತ್ತಮ ಕರಂಗಲ್ಲು, ಕಿರಣ್ ಕುಂಬಳಚೇರಿ ಇತರರು ಇದ್ದರು.