ಮಡಿಕೇರಿ, ಅ. ೧೩: ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೨-೨೩ ನೇ ಸಾಲಿನ ಗಾಂಧಿ ಜಯಂತಿ ಪ್ರಯುಕ್ತ ತಾ. ೧೪ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.