ಕೂಡಿಗೆ, ಅ. ೧೪: ಕೂಡಿಗೆ ಮೊರಾರ್ಜಿ ವಸತಿ ಶಾಲೆ, ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ತಂಡ ಹ್ಯಾಂಡ್‌ಬಾಲ್ ಮತ್ತು ಬಾಸ್ಕೆಟ್‌ಬಾಲ್ ವಿಭಾಗದಲ್ಲಿ ಜಿಲ್ಲಾಮಟ್ಟದಲ್ಲಿ ವಿಜೇತರಾಗಿ ಮಂಡ್ಯದಲ್ಲಿ ನಡೆಯಲಿರುವ ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ. ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಯ್ಯ ವಿದ್ಯಾರ್ಥಿಗಳನ್ನು ತರಬೇತಿ ಗೊಳಿಸಿದ್ದಾರೆ.