ಮಡಿಕೇರಿ, ಅ. ೧೪: ತಾ. ೧೭ ರಂದು ಘಟಿಸುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಆಚರಣೆ ಬಗ್ಗೆ ಅಗತ್ಯ ಸಿದ್ಧತೆ ಮಾಡಿ ಕೊಂಡಿರುವ ಸಂಬAಧ ಅಧಿಕಾರಿಗಳಿಂದ ಪ್ರಭಾರ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾಹಿತಿ ಪಡೆದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಭಂವರ್ ಸಿಂಗ್ ಮೀನಾ ಅವರು ಪವಿತ್ರ ತೀರ್ಥೋದ್ಭವವು ರಾತ್ರಿ ಸಂಭವಿಸುವು ದರಿಂದ ಅಗತ್ಯ ಬೆಳಕು ವ್ಯವಸ್ಥೆ ಮಾಡಿಕೊಳ್ಳಬೇಕು. ತಲಕಾವೇರಿಯಲ್ಲಿ ಗಣ್ಯರು ಹಾಗೂ ಮಾಧ್ಯಮದವರಿಗೆ ಹಿಂದಿನ ವರ್ಷದಂತೆ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡುವುದು, ಗಣ್ಯ ವ್ಯಕ್ತಿಗಳ ವಾಹನ ನಿಲುಗಡೆ, ವಿದ್ಯುನ್ಮಾನ ಮಾಧ್ಯಮಗಳ ‘ಒಬಿ’ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸುಗಮ ಸಾರಿಗೆ ಸಂಪರ್ಕ ಸಂಬAಧ ಅಗತ್ಯ ಬಸ್ ಸೌಲಭ್ಯ ಕಲ್ಪಿಸುವುದು, ಸೆಸ್ಕ್ ವತಿಯಿಂದ ವಿದ್ಯುತ್ ಸಂಪರ್ಕ ಒದಗಿಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಅಲ್ಲಲ್ಲಿ ಕಸದ ಬುಟ್ಟಿ ಇಡುವುದು, ಕುಡಿಯುವ ನೀರು ವ್ಯವಸ್ಥೆ ಮಾಡುವುದು ಮತ್ತಿತರ ಕಾರ್ಯಗಳನ್ನು ಗ್ರಾ.ಪಂ. ಅಧಿಕಾರಿಗಳು ನಿರ್ವಹಿಸುವಂತೆ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಾತ್ಕಾಲಿಕ ಕ್ಲಿನಿಕ್ ತೆರೆಯುವುದು, ಧಾರ್ಮಿಕ ಗೀತಗಾಯನ ಕಾರ್ಯಕ್ರಮ ಏರ್ಪಡಿಸುವುದು, ಹೀಗೆ ಹಲವು ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಪ್ಪ ಅವರು ತಲಕಾವೇರಿ ಪವಿತ್ರ ತೀರ್ಥೋದ್ಭವ ಸಂಬAಧ ಇದುವರೆಗೆ ಕೈಗೊಳ್ಳ ಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು. ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಅವರು ಭದ್ರತೆಯ ಬಗ್ಗೆ ಮಾಹಿತಿ ಒದಗಿಸಿದರು.

ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಅಬಕಾರಿ ಉಪ ಆಯುಕ್ತರಾದ ಜಗದೀಶ, ತಹಶೀಲ್ದಾರ್ ಪಿ.ಎಸ್.ಮಹೇಶ್, ತಾ.ಪಂ.ಇಒ ಶೇಖರ್, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಸೆಸ್ಕ್ ಎಇಇ ವಿನಯ ಕುಮಾರ್, ನಗರಸಭೆ ಪೌರಾಯುಕ್ತ ವಿಜಯ, ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ ಇತರರು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬAಧಿಸಿದAತೆ ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.