ಮಡಿಕೇರಿ, ಅ. ೧೪: ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮನೆಯೊಳಗೆ ನುಗ್ಗಿರುವ ಘಟನೆ ವರದಿಯಾಗಿದೆ.
ಸುಂಟಿಕೊಪ್ಪ ಸಮೀಪದ ಗರಗಂದೂರು ಮಲ್ಲಿಕಾರ್ಜುನ ಕಾಲೋನಿಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಮತ್ತು ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನವನ್ನು ಎಕ್ಸ್ಕವೇಟರ್ ಮೂಲಕ ಮೇಲೆತ್ತಲಾಯಿತು.