ಪೊನ್ನಂಪೇಟೆ, ಅ. ೧೪: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆಯನ್ನು ವೀರಾಜಪೇಟೆ ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ ಬಿದ್ದಪ್ಪ ನೆರವೇರಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನ ಕೌಶಲ್ಯ, ಸಾಮಾನ್ಯ ಜ್ಞಾನ, ಪ್ರಾಮಾಣಿಕತೆ ಹಾಗೂ ಶಿಸ್ತುಬದ್ದ ಜೀವನವನ್ನು ಮೈಗೂಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು. ಮತ್ತೋರ್ವ ಅತಿಥಿ ಗೋಣಿಕೊಪ್ಪಲು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ದೀಕ್ಷಿತ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ಎಲ್ಲಾ ರೀತಿಯ ಅಪರಾಧ ಚಟುವಟಿಕೆಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

ಸೈಬರ್ ಕ್ರೆöÊಮ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು. ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಹಿರಿಯ ಉಪನ್ಯಾಸಕಿ ಎಂ.ಬಿ. ಪದ್ಮ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಪಿ.ಸಿ. ದಿವ್ಯ, ಜಂಟಿ ಕಾರ್ಯದರ್ಶಿಗಳಾದ ಎಂ.ಕೆ. ಕಾರಿಯಪ್ಪ, ಎನ್.ಎಂ. ವೈಷ್ಣವಿ, ಸಾಂಸ್ಕೃತಿಕ ಕಾರ್ಯದರ್ಶಿ ಟಿ.ಪಿ. ಪ್ರತಿಭಾ, ಕ್ರೀಡಾ ಕಾರ್ಯದರ್ಶಿ ಪಿ.ಪಿ. ಅಮನ್, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಇದ್ದರು.