ಗೋಣಿಕೊಪ್ಪಲು, ಅ. ೧೪: ರೈತರ ಭತ್ತದ ಗದ್ದೆಗಳಿಗೆ ಲಗ್ಗೆ ಇಟ್ಟಿರುವ ಪುಂಡಾನೆಗಳು ರೈತರು ಬೆಳೆದಿದ್ದ ಭತ್ತದ ಫಸಲನ್ನು ಬಹುಪಾಲು ಧ್ವಂಸಗೊಳಿಸಿದ ಘಟನೆ ಪೊನ್ನಂಪೇಟೆ ತಾಲೂಕು ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೊಲ್ಲಿರ ಪೂಣಚ್ಚ ಎಂಬವರ ಭತ್ತದ ಗದ್ದೆಗಳಿಗೆ ರಾತ್ರಿಯ ವೇಳೆ ಪುಂಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಭತ್ತದ ಗದ್ದೆಗಳಲ್ಲಿ ಬೆಳೆಯಲಾಗಿದ್ದ ಭತ್ತದ ಫಸಲು ಬಹುತೇಕ ಹಾಳಾಗಿವೆ.
ಈ ಭಾಗದಲ್ಲಿ ನಿರಂತರ ಕಾಡಾನೆಗಳ ಉಪಟಳವಿದ್ದು ಇವುಗಳನ್ನು ಕಾಡಿಗೆ ಅಟ್ಟುವಂತೆ ಹಲವು ಬಾರಿ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ವಿಷಯ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಮುಖಂಡರಾದ ಕೊಲ್ಲೀರ ಬೋಪಣ್ಣ ಆರೋಪಿಸಿದ್ದಾರೆ. ಅರಣ್ಯ ಇಲಾಖೆ ಕ್ರಮಕೈಗೊಳ್ಳದಿದ್ದಲ್ಲಿ ಗ್ರಾಮಸ್ಥರು, ಸಂಘ-ಸAಸ್ಥೆಗಳ ಜೊತೆಗೂಡಿ ಪ್ರತಿಭಟನೆ ನಡೆಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.