*ಸಿದ್ದಾಪುರ, ಅ. ೧೫: ನೆಲ್ಲಿಹುದಿಕೇರಿಯ ಮುಖ್ಯ ಪಟ್ಟಣದಲ್ಲಿ ಹತ್ತಾರು ಬೀದಿ ನಾಯಿಗಳು ಸಂಚರಿಸುತ್ತಿದ್ದು, ಪುಟಾಣಿಗಳು ಸೇರಿದಂತೆ ಸಾರ್ವಜನಿಕರು ಭಯದಿಂದಲೇ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆ ಹಾಗೂ ಸಂಜೆ ಮದರಸಗಳಿಗೆ ತೆರಳುವ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿಗೆ ಮುಂದಾದ ಘಟನೆ ನಡೆದಿದೆ. ಅದೃಷ್ಟವಶಾತ್ ವ್ಯಾಪಾರಿಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಕೊಡಗಿನ ಹಲವೆಡೆ ಬೀದಿ ನಾಯಿ ಹಾವಳಿಯನ್ನು ತಪ್ಪಿಸುವ ಸಲುವಾಗಿ ಸ್ಥಳೀಯ ಪಂಚಾಯಿತಿಗಳು ಸೂಕ್ತ ಕ್ರಮ ಕೈಗೊಂಡಿವೆ. ಆದರೆ ನೆಲ್ಲಿಹುದಿಕೇರಿ ಗ್ರಾ.ಪಂ. ನಿದ್ರಾವಸ್ಥೆಯಲ್ಲಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಕ್ಷಣ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕೆAದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.