ಕೂಡಿಗೆ, ಅ. ೧೫: ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ವತಿಯಿಂದ ಕೊಡಮಾಡುವ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಯನ್ನು ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಹಿಂದಿ ಶಿಕ್ಷಕ ಎಂ.ಟಿ. ದಯಾನಂದ ಪಡೆದುಕೊಂಡರು. ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ವತಿಯಿಂದ ದಾವಣಗೆರೆಯಲ್ಲಿ ನಡೆದ ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನದಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಿದರು.