ಪೆರಾಜೆ, ಅ. ೧೫: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪೆರಾಜೆ ಮತ್ತು ಸುಳ್ಯ ತಾಲೂಕಿನ ಆಲೆಟ್ಟಿ, ಅಜ್ಜಾವರ, ಮಂಡೆಕೋಲು ಗ್ರಾಮ ಪಂಚಾಯಿತಿಗಳ ಗ್ರಂಥಾಲಯಕ್ಕೆ ಅರೆಭಾಷೆ ಸಾಹಿತ್ಯಕ್ಕೆ ಸಂಬAಧಿಸಿದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪಂಚಾಯಿತಿ ಸಿಬ್ಬಂದಿ, ಅಧಿಕಾರಿಗಳು ಹಾಜರಿದ್ದರು.