ಭೀಕರ ಅಪಘಾತದಲ್ಲಿ ೯ ಮಂದಿ ದುರ್ಮರಣ

ಬೆಂಗಳೂರು, ಅ. ೧೬: ಧರ್ಮಸ್ಥಳ ಮಂಜುನಾಥ, ಕುಕ್ಕೆ ಸುಬ್ರಹ್ಮಣ್ಯ ದೇಗುಲ ಬಳಿಕ ಹಾಸನಾಂಬೆಯ ದರ್ಶನ ಮಾಡಿ ಹಾಸನದ ಅರಸೀಕೆರೆಯ ಬಾಣಾವರಕ್ಕೆ ತೆರಳುವ ಸಂದರ್ಭ ರಾಷ್ಟಿçÃಯ ಹೆದ್ದಾರಿ ೬೬ರಲ್ಲಿ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ೯ ಮಂದಿ ಮೃತಪಟ್ಟ ಘಟನೆ ನಡೆದಿದೆ. ಸರ್ಕಾರಿ ಬಸ್, ಹಾಲಿನ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಲೀಲಾವತಿ (೫೦), ಚೈತ್ರಾ (೩೩), ಸಮರ್ಥ್ (೧೦), ದೀಪ್ತಿ (೧೨), ತನ್ಮಯಿ (೧೦), ೨ ವರ್ಷದ ಮಗು ಧ್ರುವ, ವಂದನಾ (೨೦), ದೊಡ್ಡಯ್ಯ (೬೦) ಮತ್ತು ಭಾರತಿ (೪೦) ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಟೆಂಪೋ ಟ್ರಾವಲರ್‌ನಲ್ಲಿ ಪ್ರಯಾಣಿಸುತ್ತಿದ್ದು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ದರ್ಶನ ಮಾಡಿ ತಮ್ಮೂರು ಅರಸೀಕೆರೆಯ ಬಾಣಾವರಕ್ಕೆ ವಾಪ ಸಾಗುತ್ತಿದ್ದರು. ಮೃತರ ಕುಟುಂಬಸ್ಥರಿಗೆ ತಲಾ ೨ ಲಕ್ಷ ಹಾಗೂ ಗಾಯ ಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬAಧಿ ಸಿದಂತೆ ಹಾಲಿನ ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ಕಿಸಾನ್ ಸಮ್ಮಾನ್ ಯೋಜನೆಯ ಕಂತು ಬಿಡುಗಡೆ

ನವದೆಹಲಿ, ಅ. ೧೬: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ೧೬ ಸಾವಿರ ಕೋಟಿ ರೂಪಾಯಿಗಳ ೧೨ ನೇ ಕಂತಿನ ಮೊತ್ತವನ್ನು ನೇರ ವರ್ಗಾವಣೆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ತಾ. ೧೭ ರಂದು (ಇಂದು) ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ ವರ್ಷಕ್ಕೆ ಮೂರು ಕಂತಿನ ರೂಪದಲ್ಲಿ ತಲಾ ೨ ಸಾವಿರ ರೂಪಾಯಿಯನ್ನು ಅರ್ಹ ಕೃಷಿಕ ಕುಟುಂಬಗಳು ಪಡೆಯಲು ಅರ್ಹರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ ೨೦೨೨ಕ್ಕೆ ಇಂದು ಚಾಲನೆ ನೀಡಲಿದ್ದಾರೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇಶಾದ್ಯಂತ ೧೩ ಸಾವಿರ ರೈತರು ಮತ್ತು ಸುಮಾರು ಒಂದು ಸಾವಿರದ ಐನೂರು ಕೃಷಿ ಸ್ಟಾರ್ಟ್ ಅಪ್ ಗಳು ಪಾಲ್ಗೊಳ್ಳಲಿವೆ. ವಿವಿಧ ಸಂಸ್ಥೆಗಳಿAದ ಒಂದು ಕೋಟಿಗೂ ಹೆಚ್ಚು ರೈತರು ಈ ಕಾರ್ಯಕ್ರಮದಲ್ಲಿ ವರ್ಚುಯಲ್ ಮೂಲಕ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮ್ಮೇಳನವು ಸಂಶೋಧಕರು, ನೀತಿ ನಿರೂಪಕರು ಮತ್ತು ಇತರ ಪಾಲುದಾರರು ಕೂಡಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ೬೦೦ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಇದರ ಅಡಿಯಲ್ಲಿ ದೇಶದ ರಸಗೊಬ್ಬರ ಚಿಲ್ಲರೆ ಅಂಗಡಿಗಳನ್ನು ಹಂತ ಹಂತವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳಾಗಿ ಪರಿವರ್ತಿಸಲಾಗುವುದು.

ಮನೀಶ್ ಸಿಸೋಡಿಯಾ ವಿಚಾರಣೆ

ನವದೆಹಲಿ, ಅ. ೧೬: ವಿವಾದಿತ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬAಧಿಸಿದAತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತಾ. ೧೭ರ (ಇಂದು) ಬೆಳಿಗ್ಗೆ ೧೧ ಗಂಟೆಗೆ ಕೇಂದ್ರ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಸಮನ್ಸ್ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸೌರಭ್ ಭಾರದ್ವಾಜ್ ಅವರು, ನಾಳೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ. ಬಿಜೆಪಿ ಮತ್ತು ಎಎಪಿ ನಡುವೆ ನೇರ ಸ್ಪರ್ಧೆಯಲ್ಲಿರುವ ಮುಂಬರುವ ಗುಜರಾತ್ ಚುನಾವಣೆಗೂ ಸಮನ್ಸ್ ಗೂ ಸಂಬAಧವಿದೆ. ಬಿಜೆಪಿಯವರಿಗೆ ಆಪ್ ಭಯ ಇದೆ ಎಂದಿದ್ದಾರೆ. ಇತ್ತೀಚಿನ ಸಮನ್ಸ್ಗೆ ಪ್ರತಿಕ್ರಿಯಿಸಿದ ಮನೀಶ್ ಸಿಸೋಡಿಯಾ, ಈ ಹಿಂದೆ ಸಿಬಿಐ ದಾಳಿಗಳಲ್ಲಿ ಏನೂ ಕಂಡುಬAದಿಲ್ಲ. ಆದರೂ ತಾವು ತನಿಖಾ ಸಂಸ್ಥೆಗೆ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಹೇಳಿದ್ದಾರೆ.

ಹಿಂದಿ ಕಿರುತೆರೆ ನಟಿ ವೈಶಾಲಿ ಆತ್ಮಹತ್ಯೆ

ಇಂದೋರ್, ಅ. ೧೬: ಹಿಂದಿ ಕಿರುತೆರೆ ನಟಿ ವೈಶಾಲಿ ಟಕ್ಕರ್ (೨೬) ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ನಟಿಯ ಅಕಾಲಿಕ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇಂದೋರ್‌ನ ಸಹಾಯಕ ಪೊಲೀಸ್ ಕಮಿಷನರ್ ಎಂ ರೆಹಮಾನ್ ಅವರು ಡೆತ್‌ನೋಟ್ ವಶಪಡಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ನಟಿ ಒತ್ತಡಕ್ಕೊಳಗಾಗಿದ್ದಳು ಮತ್ತು ಮಾಜಿ ಗೆಳೆಯನಿಂದ ಕಿರುಕುಳಕ್ಕೊಳಗಾಗಿದ್ದಳು ಎಂದು ಡೆತ್ ನೋಟ್‌ನಲ್ಲಿರುವುದಾಗಿ ತಿಳಿದುಬಂದಿದೆ. ವೈಶಾಲಿ ಟಕ್ಕರ್ ತಮ್ಮ ಕೊಠಡಿಯಿಂದ ಹೊರಗೆ ಬಾರದೆ ಇದ್ದಾಗ ಆಕೆಯ ತಂದೆ ಒಳಗೆ ಹೋಗಿ ನೋಡಿದಾಗ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಪಾದಯಾತ್ರೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ವಿದ್ಯುತ್ ಸ್ಪರ್ಶ

ಬಳ್ಳಾರಿ, ಅ. ೧೬: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದೆ. ಬಳ್ಳಾರಿ ಗ್ರಾಮಾಂತರ ಭಾಗದ ಮೋಕ ಎಂಬಲ್ಲಿ ನಡೆದ ‘ಜೋಡೋ’ಯಾತ್ರೆಯಲ್ಲಿ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. ಕಬ್ಬಿಣದ ಪೈಪ್‌ನಲ್ಲಿ ಬಾವುಟ ಹಿಡಿದು ಹೋಗುವಾಗ ಕಬ್ಬಿಣದ ಪೈಪ್‌ಗೆ ವಿದ್ಯುತ್ ತಂತಿ ತಗುಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. ಕೂಡಲೇ ಕಾರ್ಯಕರ್ತರನ್ನು ಆ್ಯಂಬ್ಯುಲೆನ್ಸ್ನಲ್ಲಿ ಮೋಕಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ವಿದ್ಯುತ್ ಸ್ಪರ್ಶಕ್ಕೆ ಒಳಗಾದವರು ಆರೋಗ್ಯವಾಗಿದ್ದಾರೆ. ಇನ್ನು ವಿದ್ಯುತ್ ಪ್ರವಹಿಸಿ ಗಾಯಗೊಂಡಿದ್ದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಐವರು ಕಾರ್ಯಕರ್ತರಿಗೆ ತಲಾ ೧ ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ : ದಾಖಲೆ ಸಲ್ಲಿಸಲು ಕೋರ್ಟ್ ಆದೇಶ

ಬೆಂಗಳೂರು, ಅ. ೧೬: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬAಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಎಸಿಎಂಎAಗೆ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್‌ಗಳನ್ನು ಸೇರಿಸಿರುವುದರಿಂದ ಪ್ರಕರಣಕ್ಕೆ ಸಂಬAಧಿಸಿದ ಎಲ್ಲಾ ದಾಖಲೆಗಳನ್ನು ವರ್ಗಾಯಿಸುವಂತೆ ಬೆಂಗಳೂರಿನ ಒಂದನೇ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟೆçÃಟ್ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಸಿಐಡಿಯ ಡಿವೈಎಸ್‌ಪಿ ಬಿ.ಕೆ. ಶೇಖರ್ ಅವರು ಪಿಎಸ್‌ಐ ಪ್ರಕರಣಕ್ಕೆ ಸಂಬAಧಿಸಿದ ದಾಖಲೆಗಳನ್ನು ತರಿಸಿಕೊಳ್ಳುವಂತೆ ವಿಶೇಷ ನ್ಯಾಯಾಲಯಕ್ಕೆ ಕೋರಿದ್ದರು. ತನಿಖಾಧಿಕಾರಿಯ ಕೋರಿಕೆಯನ್ನು ವಿಶೇಷ ನ್ಯಾಯಾಲಯ ಅನುಮತಿಸಿದ್ದು, ಪ್ರಕರಣಕ್ಕೆ ಸಂಬAಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಒಂದನೇ ಎಸಿಎಂಎA ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಆದೇಶಿಸಿದೆ.

ಸದ್ಗುರು ವಿರುದ್ಧ ದೂರು

ಬೆಂಗಳೂರು, ಅ. ೧೬: ಸಾರ್ವಜನಿಕವಾಗಿ ಹಾವಿನ ಪ್ರದರ್ಶನ ಮಾಡಿದ ಆರೋಪಕ್ಕೆ ಸಂಬAಧಿಸಿದAತೆ ಧಾರ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ವಿರುದ್ಧ ದೂರು ದಾಖಲಾಗಿದೆ. ಹಾವಿನ ಅಕ್ರಮ ಸಾಗಣೆ ಮಾಡಿ ಸಾರ್ವಜನಿಕವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಕ್ರೌಲ್ಟಿ ಟು ಅನಿಮಲ್ಸ್ (ಎಸ್‌ಪಿಸಿಎ) ಸದಸ್ಯರು ಚಿಕ್ಕಬಳ್ಳಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ೧೯೭೨ ರ ವೇಳಾಪಟ್ಟಿ-೨ ರ ಅಡಿಯಲ್ಲಿ ಹಾವು ಪಟ್ಟಿಮಾಡಲಾಗಿದ್ದು, ಇದರಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಕ್ಟೋಬರ್ ೯ ಮತ್ತು ೧೦ ರಂದು ಸದ್ಗುರುಗಳು ಹಾವನ್ನು ಪ್ರದರ್ಶಿಸಿದ್ದು, ಈ ಉರಗವನ್ನು ಇನ್ನೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿಲ್ಲ ಎಂದು ಸದಸ್ಯರು ದೂರಿನಲ್ಲಿ ಆರೋಪಿಸಿದ್ದಾರೆ.