ನಾಪೋಕ್ಲು, ಅ. ೧೬: ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಎಲ್ಲ ಸಂಘ-ಸAಸ್ಥೆಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಪಂಚಾಯಿತಿಯ ಯೋಜನೆಗಳ ಹಾಗೂ ಕಾರ್ಯಕ್ರಮ ಗಳ ಕುರಿತು ಮಾಹಿತಿ ಕಾರ್ಯಾಗಾರ ವನ್ನು ನೆಲಜಿ ಗ್ರಾಮದ ವಿ.ಎಸ್.ಎಸ್. ಎನ್. ಸಭಾಂಗಣದಲ್ಲಿ ಆಯೋಜಿಸ ಲಾಗಿತ್ತು. ಗ್ರಾ.ಪಂ. ಅಧ್ಯಕ್ಷ ಮಣವಟ್ಟಿರ ಹರೀಶ್ ಕುಶಾಲಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮ ಪಂಚಾಯಿತಿಯಿAದ ಅನುಷ್ಠಾನಗೊಳ್ಳುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಕಾರ್ಯ ಕ್ರಮಗಳ ಕುರಿತು ಮಾಹಿತಿಗಳನ್ನು ಜನರಿಗೆ ಪಾರದರ್ಶಕವಾಗಿ ತಿಳಿಸುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ತಿಳಿಸಿದರು.

ಮಡಿಕೇರಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಖರ್ ಮಾತನಾಡಿ, ಗ್ರಾಮ ಪಂಚಾಯಿತಿ ವತಿಯಿಂದ ಸಾರ್ವಜನಿಕರಿಗಾಗಿ ಗ್ರಾಮ ಪಂಚಾಯಿತಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ ವನ್ನು ಆಯೋಜನೆ ಮಾಡಿರುವುದು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಎಂದರು. ಈ ಕಾರ್ಯಕ್ರಮವನ್ನು ತಾಲೂಕಿನ ಇತರ ಪಂಚಾಯಿತಿ ಗಳಲ್ಲೂ ಕೂಡ ಅನುಷ್ಠಾನ ಗೊಳಿಸುವುದಾಗಿ ತಿಳಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಸುಮಾರು ೧೨೦ಕ್ಕೂ ಹೆಚ್ಚಿನ ಜನರು ಭಾಗವಹಿಸಿ ಗ್ರಾಮ ಪಂಚಾಯಿತಿಯ ಕಾರ್ಯಗಳು, ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ, ಪಂಚಾಯಿತಿ ನಿಧಿ, ಹದಿನೈದನೇ ಹಣಕಾಸು ಯೋಜನೆ, ಸ್ವಚ್ಛ ಭಾರತ್ ಮಿಷನ್, ಗ್ರಾಮ ಪಂಚಾಯಿತಿಯ ಸೇವೆಗಳು, ವಸತಿ ಯೋಜನೆ ಹಾಗೂ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು. ಸಾಮಾಜಿಕ ಲೆಕ್ಕ ಪರಿಶೋಧಕ ಪ್ರೀತಂ ಪೊನ್ನಪ್ಪ, ತಾಲೂಕು ಪಂಚಾಯಿತಿ ಲೆಕ್ಕ ಶಾಖೆಯ ಅಧಿಕಾರಿಗಳಾದ ಸುನಿತಾ, ಹುಸೇನ್, ಮಕ್ಕಂದೂರು ಪಿಡಿಓ ಗೀತಾಂಜಲಿ, ನರೇಗ ವಿಭಾಗದ ದಿಲೀಪ್, ಬಿನ್ಸಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಾಳೆಯಡ ದೀನ ಮಾಯಮ್ಮ, ಸದಸ್ಯರಾದ ಮಚ್ಚುರ ರವೀಂದ್ರ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಚೋಕಿರ ಬೇಬಿ ಭೀಮಯ್ಯ, ಅನಿತಾ ಜಗದೀಶ್, ಕೋಡಿಯಂಡ ರಾಜೀವಿ, ವಿ.ಎಸ್.ಎಸ್.ಎನ್. ಅಧ್ಯಕ್ಷ ಮಾಳೆಯಂಡ ವಿಜು ಕಾರ್ಯಕ್ರಮ ದಲ್ಲಿ ಹಾಜರಿದ್ದರು. ಪಿಡಿಓ ಚೌರಿರ ಪೂಣಚ್ಚ ಸ್ವಾಗತಿಸಿ, ವಂದಿಸಿದರು.