ಸುಂಟಿಕೊಪ್ಪ, ಅ. ೧೬: ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ೨೦೨೨-೨೩ನೇ ಸಾಲಿನ ಶೈಕ್ಷಣಿಕ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ತಾ.೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಸೆಂಟ್ ಮೇರಿಸ್ ಸಭಾಂಗಣದಲ್ಲಿ ನಡೆಯಲಿದೆ.
ಉದ್ಘಾಟನೆಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ನೆರವೇರಿಸಲಿದ್ದು ಪ್ರತಿಭಾ ಪುರಸ್ಕಾರವನ್ನು ವೀರಾಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಸಾಧಕರಿಗೆ ಸನ್ಮಾನವನ್ನು ಎಂ.ಎಲ್.ಸಿ ಬೋಜೇಗೌಡರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ಧಬಸಪ್ಪ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮು ಅ.ಗುಗವಾಡ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ದೇವರಾಜ್ ಗೌಡ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಎಸ್. ಚೇತನ್, ಕೊಡಗು ಜಿಲ್ಲಾ ಶಿಕ್ಷಣ ಉಪನಿರ್ದೇಶಕ ವೇದಮೂರ್ತಿ, ಕೂಡಿಗೆ ಡಯಟ್ ಉಪನಿರ್ದೇಶಕ ಮಲ್ಲೇಶಪ್ಪ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.