ಭಾಗಮಂಡಲ, ಅ. ೧೬: ರೈತರ ಜೀವನಾಡಿ, ಪವಿತ್ರ ಕಾವೇರಿ ಜಲರೂಪಿಣಿಯಾಗಿ ಭಕ್ತಾದಿಗಳಿಗೆ ದರ್ಶನ ನೀಡಲು ಕ್ಷಣಗಣನೆ ಆರಂಭಗೊAಡಿದೆ. ತಾ. ೧೭ ರಂದು (ಇಂದು) ರಾತ್ರಿ ೭.೨೧ಕ್ಕೆ ಮೇಷ ಲಗ್ನದಲ್ಲಿ ಕುಂಡಿಕೆಯಿAದ ಚಿಮ್ಮುವ ತೀರ್ಥೋದ್ಭವವನ್ನು ಕಣ್ತುಂಬಿ ಕೊಳ್ಳಲು ಭಕ್ತಗಣ ಕಾತರದಿಂದ ಕಾಯುತ್ತಿದೆ. ಈ ಹಿನ್ನೆಲೆ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ದೇವಾಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕ್ಷೇತ್ರ ಹೂವಿನ ಹಾಗೂ ವಿದ್ಯುತ್ ದೀಪ ಅಲಂಕಾರ ದಿಂದ ಮಿನುಗುತ್ತಿದೆ. ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಕೈಗೊಂಡಿದೆ.

ಆಚರಣೆಯ ಅಂಗವಾಗಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ತಲಕಾವೇರಿಗೆ ಕೊಂಡೊಯ್ಯ ಲಾಯಿತು. ಕಾರ್ಯನಿರ್ವಾಹಣಾಧಿ ಕಾರಿ ಕೃಷ್ಣಪ್ಪ ಅವರಿಂದ ತಕ್ಕರಾದ ಕೋಡಿ ಮೋಟಯ್ಯ ಮಾತೆಗೆ ತೊಡಿಸುವ ಚಿನ್ನಾಭರಣಗಳನ್ನು ಪಡೆದುಕೊಂಡರು. ಬಳಿಕ ಆಭರಣಗಳಿಗೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾವೇರಿ ಮಾತೆಗೆ ಚಿನ್ನಾಭರಣ ತೊಡಿಸಲಾಯಿತು.

ಕ್ಷೇತ್ರದಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಗಳಲ್ಲಿ ಜಾತ್ರೆ ಅಂಗವಾಗಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ. ಭಕ್ತರು ಕೂಡ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ಮಧ್ಯಾಹ್ನ ೨ ಗಂಟೆಯ ನಂತರ ತಲಕಾವೇರಿಯ ಕೊಳದಲ್ಲಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ. ಕುಂಕುಮಾರ್ಚನೆಗೆ ಅವಕಾಶವಿ ರುವುದಿಲ್ಲ.

(ಮೊದಲ ಪುಟದಿಂದ) ಭಾಗಮಂಡಲದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳಂತೆ ಯಾವುದೇ ಗೊಂದಲವಿಲ್ಲದೆ ಜಾತ್ರೆಯನ್ನು ನಡೆಸಲಾಗುವುದು ಎಂದರು. ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ಕಾವೇರಿ ಮಾತೆಯ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು ಜಾತ್ರೆ ಯಶಸ್ವಿಯಾಗಿ ನಡೆಯಲಿದೆ ಎಂದರು. ತಾ. ೧೭ ರ (ಇಂದು) ಬೆಳಿಗ್ಗೆ ೬ ರಿಂದ ಸಂಜೆ ೬ ವರೆಗೆ ಪಿಂಡ ಪ್ರದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ತಿಳಿಸಿದರು.

ಈ ಸಂದರ್ಭ ಶಾಸಕ ಕೆ.ಜಿ. ಬೋಪಯ್ಯ ಕುಟುಂಬ ಸಮೇತ ಆಗಮಿಸಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಜಾತ್ರೆ ನಿರ್ವಿಘ್ನವಾಗಿ ನೆರವೇರುವಂತೆ ಪ್ರಾರ್ಥಿಸಿದರು. ಈ ಸಂದರ್ಭ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ತಕ್ಕರಾದ ಕೋಡಿ ಮೋಟಯ್ಯ, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪ್ರಮುಖರಾದ ಮನು ಮುತ್ತಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್ ಮತ್ತಿತರರು ಇದ್ದರು. -ಸುನಿಲ್ ಕುಯ್ಯಮುಡಿ