*ಗೋಣಿಕೊಪ್ಪ, ಅ. ೧೬: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನುಕುರುಬ ಸಮುದಾಯದ ಕರಿಯಪ್ಪ ಎಂಬಾತನನ್ನು ಜಿಂಕೆ ಮಾಂಸ ಮಾರಾಟ ಆರೋಪದಲ್ಲಿ ವಿಚಾರಣೆ ನಡೆಸುವ ನೆಪದೊಂದಿಗೆ ಅಮಾನುಷವಾಗಿ ಹಲ್ಲೆ ಮಾಡಿ ಸಾಯಿಸಿದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಮೂಲ ಆದಿವಾಸಿ ವೇದಿಕೆಯ ಉಪಾಧ್ಯಕ್ಷ ನಾಗರಹೊಳೆಯ ಜೆ.ಕೆ. ತಿಮ್ಮ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ತಿಮ್ಮ ಅವರು, ರಾಜ್ಯದ ನಾನಾ ಭಾಗಗಳಲ್ಲಿ ಬನಿರಂತರವಾಗಿ ಅರಣ್ಯಾಧಿಕಾರಿಗಳು ಆದಿವಾಸಿಗಳನ್ನು ಅಮಾನವೀಯವಾಗಿ ನಡೆಸಿಕೊಳುತ್ತಿದ್ದು ಉದ್ದೇಶಪೂರ್ವಕವಾಗಿ ಸುಳ್ಳು ಕೇಸುಗಳನ್ನು ಹಾಕಿ ಬಂಧಿಸಿ ಹಲ್ಲೆ ನಡೆಸುತ್ತಿದ್ದಾರೆ. ಕರಿಯಪ್ಪ ಸಾವಿಗೆ ಕಾರಣರಾದ ಅರಣ್ಯ ಅಧಿಕಾರಿಗಳನ್ನು ಬಂಧಿಸಬೇಕು. ಕರಿಯಪ್ಪನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಸಿದರು.