ನಾಪೋಕ್ಲು, ಅ. ೧೬: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾ ಕಾಂಕ್ಷೆಯ ಯೋಜನೆಯಂತೆ ಸ್ವಚ್ಛ ಭಾರತ್ ಕಾರ್ಯಕ್ರಮದಡಿ ಪರಿಸರ ಸ್ವಚ್ಛತೆ, ಜಲಜೀವನ್ ಮಿಷನ್ ಅಡಿ ಮನೆಮನೆಗೆ ಕುಡಿಯುವ ನೀರು ಸೇರಿದಂತೆ ನರೇಗಾದಲ್ಲಿ ೨೬೦ ಕಾಮ ಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹೇಳಿದರು.

ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ೬೦ ಲಕ್ಷ ವೆಚ್ಚದ ನೂತನ ಕಚೇರಿ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿ, ೧೪ನೇ ಹಣಕಾಸು ಯೋಜನೆಯಡಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಅನುದಾನ ನೀಡಲಾಗುತ್ತಿದ್ದು, ಎಲ್ಲಾ ಕಡೆಯಲ್ಲೂ ಗ್ರಾಮ ಪಂಚಾಯಿತಿಯ ನೂತನ ಪಂಚಾಯಿತಿ ಕಟ್ಟಡ ನಿರ್ಮಾಣವಾಗುತ್ತಿದೆ. ಆ ಮೂಲಕ ಗ್ರಾಮದ ಜನರಿಗೆ ಪಂಚಾಯಿತಿಯ ಎಲ್ಲಾ ಸೌಲಭ್ಯಗಳು ಲಭಿಸಲಿವೆ ಎಂದು ಹೇಳಿದರು. ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಎಲ್ಲಾ ಗ್ರಾಮಗಳಲ್ಲಿ ಸುಸಜ್ಜಿತ ಪಂಚಾಯಿತಿ ಕಟ್ಟಡ ನಿರ್ಮಾಣಗೊಂಡು ಡಿಜಿಟ ಲೀಕರಣ ಆಗುತ್ತಿರುವುದರಿಂದ ಜನರು ಪಟ್ಟಣಕ್ಕೆ ಅಲೆದಾಡುವುದು ತಪ್ಪುತ್ತದೆ. ಸ್ವಚ್ಛ ಭಾರತ್ ಯೋಜನೆಯಡಿ ಎಲ್ಲಾ ಪಂಚಾಯಿತಿಗಳಿಗೆ ಅನುದಾನ ನೀಡಲಾಗುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ರಾಜ್ಯ ಬಿಜೆಪಿ ಕಾರ್ಯ ಕಾರಿಣಿ ಸದಸ್ಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮಾತನಾಡಿ, ಚಂಗೇಟಿರ ಕುಟುಂಬಸ್ಥರು ಉದಾರ ವಾಗಿ ಶಾಲೆಗೆ ನೀಡಿದ ಸ್ಥಳದಲ್ಲಿ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯ ಸ್ಥಳವನ್ನು ವರ್ಗಾಯಿಸಲಾಗಿದೆ. ಕಸ ವಿಲೇವಾರಿ ಕಾರ್ಯ ಪಂಚಾ ಯಿತಿ ವ್ಯಾಪ್ತಿಯಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ. ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಸ್ಥರ ನೆರವಿನೊಂದಿಗೆ ಸ್ವಚ್ಛತಾ ಕಾರ್ಯ ವನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ ಎಂದರು. ಬಳಿಕ ದೊಡ್ಡಪುಲಿಕೋಟು ಗ್ರಾಮದಲ್ಲಿ ಸರಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾದ ನೂತನ ಉದ್ಯಾನ ವನ್ನು ಪ್ರತಾಪ್ ಸಿಂಹ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಣವಟ್ಟೀರ ಹರೀಶ್ ಕುಶಾಲಪ್ಪ, ಉಪಾಧ್ಯಕ್ಷೆ ಬಾಳೆಯಡ ದೀನಾ ಮಾಯಮ್ಮ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕರವಂಡ ಲವ ನಾಣಯ್ಯ, ತಾಲೂಕು ಬಿಜೆಪಿ ಸಮಿತಿ ಸದಸ್ಯ ಬದ್ದಂಜೆಟ್ಟಿರ ದೇವಿ ದೇವಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ, ಚೋಕಿರ ಬಾಬಿ ಭೀಮಯ್ಯ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಕೋಡಿಯಂಡ ರಾಜೀವ್ ಸೇರಿದಂತೆ ಇನ್ನಿತರರು ಹಾಜರಿದ್ದರು.