ಸುಂಟಿಕೊಪ್ಪ, ಅ. ೧೮: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸರ್ಕಾರಿ ನರ್ಸಿಂಗ್ ಕಾಲೇಜಿನ ದ್ವಿತೀಯ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಸುಂಟ್ಟಿಕೊಪ್ಪದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಪ್ರಾಥಮಿಕ ಶಾಲಾ ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿ ಗಳಿಗೆ ಆರೋಗ್ಯ ಮಾಹಿತಿ ನೀಡು ವುದು ಅತ್ಯಗತ್ಯವಾಗಿದ್ದು, ಮಕ್ಕಳು ಆರೋಗ್ಯ ಮಾಹಿತಿಯನ್ನು ಪಡೆದುಕೊಂಡು ತಮ್ಮ ದೈನಂದಿನ ಸುಂಟಿಕೊಪ್ಪ, ಅ. ೧೮: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸರ್ಕಾರಿ ನರ್ಸಿಂಗ್ ಕಾಲೇಜಿನ ದ್ವಿತೀಯ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಸುಂಟ್ಟಿಕೊಪ್ಪದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಪ್ರಾಥಮಿಕ ಶಾಲಾ ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿ ಗಳಿಗೆ ಆರೋಗ್ಯ ಮಾಹಿತಿ ನೀಡು ವುದು ಅತ್ಯಗತ್ಯವಾಗಿದ್ದು, ಮಕ್ಕಳು ಆರೋಗ್ಯ ಮಾಹಿತಿಯನ್ನು ಪಡೆದುಕೊಂಡು ತಮ್ಮ ದೈನಂದಿನ ಆರೋಗ್ಯ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ವೈಯಕ್ತಿಕ ಶುಚಿತ್ವ, ಪರಿಸರ ನೈರ್ಮಲ್ಯ, ರಸ್ತೆ ಸುರಕ್ಷತೆ ಗಳು, ಸಮತೋಲನ ಆಹಾರ, ಪ್ರಥಮ ಚಿಕಿತ್ಸೆ, ಧೂಮಪಾನದ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು. ಶಾಲೆಯ ಶಿಕ್ಷಕ, ಶಿಕ್ಷಕಿಯರು, ನರ್ಸಿಂಗ್ ವಿದ್ಯಾರ್ಥಿ ಗಳು ಪಾಲ್ಗೊಂಡಿದ್ದರು. ಜಗದೀಶ್ ಸ್ವಾಗತಿಸಿ, ಹರ್ಷಿತ ನಿರೂಪಿಸಿ, ಪ್ರಶಾಂತ್ ವಂದಿಸಿದರು.