ಸೋಮವಾರಪೇಟೆ, ಅ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೋಮವಾರಪೇಟೆ ತಾಲೂಕು ಇದರ ವತಿಯಿಂದ ಇಲ್ಲಿನ ಶ್ರೀ ಮುತ್ತಪ್ಪಸ್ವಾಮಿ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಅಭಿವೃದ್ಧಿ ಕಾರ್ಯಗಳಿಗಾಗಿ ರೂ. ೧.೫೦ ಲಕ್ಷ ಧನ ಸಹಾಯ ನೀಡಲಾಯಿತು.

ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ. ವಿನೋದ್ ಅವರಿಗೆ ಧನ ಸಹಾಯಕ ಚೆಕ್‌ನ್ನು ಹಸ್ತಾಂತರಿಸಿದರು. ಈ ಸಂದರ್ಭ ಶಾಸಕ ಅಪ್ಪಚ್ಚು ರಂಜನ್, ಕಲ್ಲುಮಠದ ಮಹಾಂತ ಸ್ವಾಮೀಜಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಇದ್ದರು.