ಕೂಡಿಗೆ, ಅ. ೧೭: ಮುಳ್ಳು ಸೋಗೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ. ಚೆಲುವರಾಜು ವಹಿಸಿದ್ದರು. ನೋಡಲ್ ಅಧಿಕಾರಿಯಾಗಿ ಶಿಕ್ಷಣ ಸಂಯೋಜಕ ಶೇಖರ್ ಹಾಗೂ ಅಭಿವೃದ್ಧಿ ಅಧಿಕಾರಿ ಸುಮೇಶ್ ಹಾಗೂ ಸದಸ್ಯರು ಉಪಸ್ಥಿತರಿ ದ್ದರು.
ಕಾರ್ಯಕ್ರಮದಲ್ಲಿ ೨೦೨೧-೨೨ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಯಿAದ ಕೈಗೊಂಡ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು. ಜಮಾ ಬಂದಿ ವರದಿಯನ್ನು ಕಾರ್ಯದರ್ಶಿ ಮಂಜುನಾಥ ವಾಚಿಸಿದರು
ಗ್ರಾಮ ಪಂಚಾಯಿತಿ ಸದಸ್ಯೆ ಹರಣಿ ಪ್ರಭಾಕರ್ ಪ್ರಾರ್ಥಿಸಿ, ಅಭಿವೃದ್ಧಿ ಅಧಿಕಾರಿ ಸುಮೇಶ್ ಸ್ವಾಗತಿಸಿದರು.