ಮಡಿಕೇರಿ, ಅ. ೧೮: ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಮಡಿಕೆ ತಯಾರಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. ೨೩ ರಂದು ಸಂಘದ ಅಧ್ಯಕ್ಷ ಎಂ.ಡಿ. ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಕಾರ್ಯದರ್ಶಿ ಕೆ.ಎ. ದಿನಮಣಿ ಅಪ್ಪಣ್ಣ, ಅಂದು ಬೆಳಗ್ಗೆ ೯.೩೦ ಗಂಟೆಗೆ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಕಾವೇರಿ ಕಲಾಕ್ಷೇತ್ರದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂಘದ ಸ್ಥಾಪಕ ಅಧ್ಯಕ್ಷೆ ಕೆ.ಎಸ್. ಮುತ್ತಮ್ಮ ಕೋಟಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ೫ನೇ ತರಗತಿ ಯಿಂದ ಪಿಯುಸಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಗುವುದು ಹಾಗೂ ಜನಾಂಗದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು.
ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮುಂಚಿತವಾಗಿ ೭೩೪೯೦೫೪೭೦೫, ೮೧೦೫೫೪೯೧೩೮ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಕೊಳ್ಳುವಂತೆ ಕೆ.ಎ. ದಿನಮಣಿ ತಿಳಿಸಿದ್ದಾರೆ.