ಮಡಿಕೇರಿ, ಅ. ೧೮: ೭ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ತಾ. ೨೩ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶ್ರೀ ಕೆ.ವಿ.ಜಿ. ಆಯುರ್ವೇದ ಮಹಾವಿದ್ಯಾಲಯ ಸುಳ್ಯ, ನೀಮಾ ಕೊಡಗು ಹಾಗೂ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್‌ಕ್ರಾಸ್, ರೋಟರಿ ವುಡ್ಸ್, ಬಿಜೆಪಿ ಯುವ ಮೋರ್ಚಾ, ಕೇಸರಿ ಯೂತ್ ಮೂವ್‌ಮೆಂಟ್, ಔಷಧಿ ವ್ಯಾಪಾರಿಗಳ ಸಂಘ ಹಾಗೂ ಕೊಡಗು ಪತ್ರಕರ್ತರ ಸಂಘ ಜಂಟಿ ಆಶ್ರಯದಲ್ಲಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಬೆಳಿಗ್ಗೆ ೯ ಗಂಟೆಯಿAದ ಶಿಬಿರ ಆಯೋಜಿಸಲಾಗಿದೆ.

ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ನುರಿತ ಆಯುರ್ವೇದ ತಜ್ಞರಿಂದ ತಪಾಸಣೆ ಮತ್ತು ಸಲಹೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.