ಮಡಿಕೇರಿ, ಅ. ೧೮: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕಚೇರಿ ಸಭಾಂಗಣದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ನಡೆಯಿತು.

ಕೊಡವ ಭಾಷೆಯನ್ನು ಸಂವಿಧಾನದ ೮ ನೇ ಪರಿಚ್ಛೇಧಕ್ಕೆ ಸೇರಿಸಲು ಮನವಿ ಪತ್ರ ಹಾಗೂ ಅದಕ್ಕೆ ಸಂಬAಧಿಸಿದ ಮಾಹಿತಿಗಳ ದಾಖಲೆಗಳನ್ನು ಪ್ರಧಾನಮಂತ್ರಿಗಳು, ರಾಷ್ಟçಪತಿಗಳು, ಕೇಂದ್ರ ಗೃಹ ಸಚಿವರು, ಕೇಂದ್ರ ಅಲ್ಪಸಂಖ್ಯಾತ ಸಚಿವರು, ಲೋಕಸಭಾ ಸದಸ್ಯರಾದ ಸದಾನಂದಗೌಡ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗಡೆ ಅವರಿಗೆ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿಗಳಿಗೆ ಕಳುಹಿಸಲು ನಿರ್ಣಯಿಸಲಾಯಿತು.

೮ನೇ ಪರಿಚ್ಛೇದಕ್ಕೆ ಸೇರಿಸುವ ಈ ಮನವಿಯನ್ನು ಹಿಂದೆ ತಾ. ೨೨ ರಂದು ಮುಖ್ಯಮಂತ್ರಿಗಳಿಗೂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೂ, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹರವರಿಗೂ ಹಾಗೂ ಸೆಂಟ್ರಲ್ ಇನ್ಟಿಟ್ಯೂಟ್ ಆಫ್ ಇಂಡಿಯನ್ ಲ್ಯಾಂಗವೇಜ್ ಇವರಿಗೂ ಖುದ್ದಾಗಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಅಮ್ಮಾಟಂಡ ಡಾ.ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.