ಕೂಡಿಗೆ, ಅ. ೧೮: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡೆ ಬೆಟ್ಟ ಗ್ರಾಮದಲ್ಲಿ ವಾಸಿಸುತ್ತಿರುವ ೧೩ ಜೇನುಕುರುಬ ಕುಟುಂಬಗಳು ಹಕ್ಕು ಪತ್ರಕ್ಕಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಉಪ ವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿಗೆ ಗ್ರಾಮ ಅರಣ್ಯ ಹಕ್ಕು ಸಮಿತಿ ಮುಖಾಂತರ ತಮ್ಮ ಜಾಗಕ್ಕೆ ಹಕ್ಕು ಪತ್ರ ಕೋರಿ ೨೦೧೫ರಲ್ಲಿ ಅರ್ಜಿ ಸಲ್ಲಿಸಿದ್ದು, ೭ ವರ್ಷಗಳು ಕಳೆದರೂ ಹಕ್ಕುಪತ್ರ ಲಭಿಸಿಲ್ಲ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಶಾಸಕರ ಗಮನಕ್ಕೆ ತಂದರು.

ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭ ಗ್ರಾ.ಪಂ. ಸದಸ್ಯ ಕುಮಾರ್, ರವಿ, ಹಾಡಿಯ ನಿವಾಸಿಗಳಾದ ಹರೀಶ್, ಮೋಹನ, ಮುತ್ತ, ತಿಮ್ಮಯ್ಯ, ಲಿಂಗ, ಪ್ರಮೀಳಾ ಮತ್ತಿತರರು ಉಪಸ್ಥಿತರಿದ್ದರು.