ಮಡಿಕೇರಿ, ಅ. ೧೯: ನೀಮಾ ಕೊಡಗು ವತಿಯಿಂದ ೭ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ತಾ.೨೩ರಂದು ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ನೀಮಾ ಕೊಡಗು ಅಧ್ಯಕ್ಷ ಡಾ. ಎ.ಆರ್.ರಾಜಾರಾಂ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುರ್ವೇದದ ಆದಿ ದೇವನಾದ ಶ್ರೀ ಧನ್ವಂತರಿ ಜಯಂತಿಯನ್ನು ಭಾರತ ಸರ್ಕಾರ ಆಯುರ್ವೇದ ದಿನಾಚರಣೆಯನ್ನಾಗಿ ಆಚರಿಸುತ್ತಿದೆ. ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಜಾಗಗಳಲ್ಲಿ ನಡೆಯುವಂತೆ ಜಿಲ್ಲೆಯಲ್ಲಿಯೂ ತಾ.೨೩ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್‌ಕ್ರಾಸ್, ಮಡಿಕೇರಿ ರೋಟರಿ ವುಡ್ಸ್, ಕೊಡಗು ಹವ್ಯಕ ವಲಯ, ಬಿಜೆಪಿ ಯುವಮೋರ್ಚ, ಕೇಸರಿ ಯೂತ್‌ಮೂವ್ಮೆಂಟ್, ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ, ಕೊಡಗು ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಶಿಬಿರ ನಡೆಯಲಿದೆ ಎಂದರು.
ಅAದು ಬೆ. ೭.೩೦ ರಿಂದ ೯ ಗಂಟೆಯವರೆಗೆ ಶ್ರೀ ಧನ್ವಂತರಿ ಹೋಮ ಹಾಗೂ ಮಂಗಳಾರತಿ ನಡೆದ ಬಳಿಕ ೯.೧೫ರಿಂದ ೧೦ ಗಂಟೆಯ ತನಕ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಎಂಎಲ್‌ಸಿಗಳಾದ ಸುಜಾ ಕುಶಾಲಪ್ಪ, ಭೋಜೇಗೌಡ, ಆಯನೂರು ಮಂಜುನಾಥ್ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮಾತನಾಡಿ, ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ನುರಿತ ಆಯುರ್ವೇದ ತಜ್ಞರಿಂದ ತಪಾಸಣೆ ಮತ್ತು ಸಲಹೆ ನೀಡಲಾಗುತ್ತದೆ. ಕೊಡಗಿನಲ್ಲಿ ಪ್ರಪ್ರಥಮ ಬಾರಿಗೆ ಒಂದೇ ಶಿಬಿರದಲ್ಲಿ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ, ಹೋಮಿಯೋಪತಿ ವೈದ್ಯರುಗಳು ಲಭ್ಯರಿರುತ್ತಾರೆ ಎಂದ ಅವರು, ಜಿಲ್ಲೆಯ ಜನತೆ
(ಮೊದಲ ಪುಟದಿಂದ) ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ರೋಟರಿ ವುಡ್ಸ್ ಅಧ್ಯಕ್ಷ ಸಂಪತ್ ಕುಮಾರ್, ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ವಸಂತ್ ಕುಮಾರ್, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ರವೀಂದ್ರ ರೈ, ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್ ಹಾಜರಿದ್ದರು.