ಮಡಿಕೇರಿ, ಅ. ೨೦: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ. ಜಿಲ್ಲಾ ಕಚೇರಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ, ೨೦೨೨-೨೩ನೇ ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈ ಬಗ್ಗೆ ಪೊನ್ನಂಪೇಟೆಯ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಪಿ.ಎಂ.ಇ.ಜಿ.ಪಿ. ಸಾಲ ಯೋಜನೆಯ ಒಂದು ದಿನದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರಂಭವನ್ನು ಲೀಡ್ ಬ್ಯಾಂಕ್ನ ವ್ಯವಸ್ಥಾಪಕ ಶಿವಕುಮಾರ್ ಅವರು ಉದ್ಘಾಟಿಸಿ ಪಿ.ಎಂ.ಇ.ಜಿ.ಪಿ. ಯೋಜನೆಯಡಿ ನಿರುದ್ಯೋಗಿಗಳು ಸ್ವಂತ ಉದ್ಯೋಗ ಮಾಡಲು ಆಸಕ್ತರಾಗುವಂತೆ ತಿಳಿಸಿದರು.
ಖಾದಿ ಮಂಡಳಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳಾದ ಹೆಚ್.ಆರ್. ರಾಮಕೃಷ್ಣ ಅವರು, ಪಿ.ಎಂ.ಇ.ಜಿ.ಪಿ. ಯೋಜನೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಖಾದಿ ಆಯೋಗದ ಮರಾಠೆ ಅವರು ಆನ್ಲೈನ್ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದರು. ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ಯೋಗೇಶ್ ಕುಮಾರ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರಕಾರಿ ಉದ್ಯೋಗ ಸಿಗುವುದು ಕಷ್ಟಕರವಾಗಿದ್ದು, ಸ್ವಂತ ಉದ್ಯೋಗ ಬೆಳೆಸಿಕೊಳ್ಳಲು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಓ.ಡಿ.ಪಿ. ಸಂಸ್ಥೆಯ ಜಾಯಿಸ್ ಮಿನಿಜಿಸ್, ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ ಹಾಗೂ ಸಂಜೀವಿನಿ ಒಕ್ಕೂಟ, ಸಂಘ-ಸAಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.