ಮಡಿಕೇರಿ, ಅ. ೨೦: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ಚಿತ್ತ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾಗಮಂಡಲ ಜನತಾ ಕ್ಲಿನಿಕ್ ಸಂಯುಕ್ತ ಆಶ್ರಯದಲ್ಲಿ ತಾ. ೨೩ ರಂದು ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಭಾಗಮಂಡಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆಯ ತನಕ ಮಾನಸಿಕ ತೊಂದರೆ, ಬುದ್ಧಿ ಮಾಂದ್ಯತೆ, ಮೂರ್ಛೆ ರೋಗ, ನಿದ್ರಾಹೀನತೆ, ದೀರ್ಘಕಾಲದ ಮೈಕೈನೋವು, ಮಕ್ಕಳ ಹಠಮಾರಿತನ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಸೇರಿದಂತೆ ಇನ್ನಿತರ ಮಾನಸಿಕ ಸಮಸ್ಯೆಗಳ ಬಗ್ಗೆ ನುರಿತ ವೈದ್ಯರಿಂದ ತಪಾಸಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.