ಮಡಿಕೇರಿ, ಅ. ೨೦: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಆಶ್ರಯದಲ್ಲಿ ೨೦೨೧-೨೨ನೇ ಸಾಲಿನ ದಿ. ಪುಟ್ಟಮ್ಮ ಮತ್ತು ದಿ. ಹೆಬ್ಬಾಲೆ ನಂಜಾಚಾರ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ತಾ. ೨೧ ರಂದು (ಇಂದು) ಅಪರಾಹ್ನ ೨.೩೦ ಗಂಟೆಗೆ ಮಕ್ಕಂದೂರು ಪ್ರೌಢಶಾಲೆಯಲ್ಲಿ ನಡೆಯಲಿದೆ.
ತಾಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೆಕಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುಕ್ರುದೇವುಗೌಡ ಉದ್ಘಾಟಿಸುವರು. ವಿಶೇಷ ಅತಿಥಿಯಾಗಿ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮುಖ್ಯ ಅತಿಥಿಗಳಾಗಿ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ರೇವತಿ ರಮೇಶ್, ಸರಕಾರಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಬಿ.ಎಸ್. ಸರಸ್ವತಿ ಉಪಸ್ಥಿತರಿರುವರು.