ಯು.ಕೆ. ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ
ಲಂಡನ್, ಅ. ೨೦: ಯು.ಕೆ. ನೂತನ ಪ್ರಧಾನಿಯಾಗಿ ಆಯ್ಕೆಗೊಂಡು ಅಧಿಕಾರ ವಹಿಸಿಕೊಂಡ ಲಿಜ್ ಟ್ರಸ್ ಅವರು ೪೫ ದಿನಗಳ ಅಧಿಕಾರಾವಧಿಯ ನಂತರ ಪ್ರಧಾನಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದರು, ಮುಂದಿನ ಪ್ರಧಾನಿ ಆಯ್ಕೆವರೆಗೆ ತಾನು ಅಧಿಕಾರದಲ್ಲಿ ಮುಂದುವರಿಯುವುದಾಗಿ ಘೋಷಿಸಿದರು. ಟ್ರಸ್ ಅವರು ಅಧಿಕಾರ ವಹಿಸಿಕೊಂಡ ಕೇವಲ ಆರು ವಾರಗಳ ನಂತರ ಪ್ರಕಟಿಸಿದ ನೂತನ ಆರ್ಥಿಕ ನೀತಿಯು ಇಡೀ ರಾಷ್ಟçದ ಬಾಂಡ್ ಮಾರುಕಟ್ಟೆ ಬಿದ್ದು ಹೋಗಲು ಕಾರಣವಾಯಿತು ಎನ್ನುವ ಗುರುತರ ಆರೋಪ ಕೇಳಿಬಂದಿತು. ಕಳೆದ ತಿಂಗಳು ಸರ್ಕಾರವು ಅನಾವರಣಗೊಳಿಸಿದ ಆರ್ಥಿಕ ಯೋಜನೆಯು ಹಣಕಾಸಿನ ಪ್ರಕ್ಷುಬ್ಧತೆ ಮತ್ತು ರಾಜಕೀಯ ಬಿಕ್ಕಟ್ಟನ್ನು ಉಂಟುಮಾಡಿತು, ಈ ಆರ್ಥಿಕ ಧೋರಣೆ ಆಡಳಿತ ಕನ್ಸರ್ವೇಟಿವ್ ಪಕ್ಷಕ್ಕೇ ಹೊಡೆತವುಂಟುಮಾಡಿದಾಗ ಆ ಪಕ್ಷದಲ್ಲಿಯೇ ಅಪಸ್ವರ ಕೇಳಿಬಂದಿತು. ಇದು ಯು.ಕೆ. ಇತಿಹಾಸದಲ್ಲಿಯೇ ಕಡಿಮೆ ಅವಧಿಯ ಪ್ರಧಾನಿ ಸ್ಥಾನದ ಅಧಿಕಾರವಾಗಿದೆ.
ನ. ೧ ರಂದು ಪುನಿತ್ ರಾಜ್ಕುಮಾರ್ಗೆ ಪ್ರಶಸ್ತಿ ಪ್ರದಾನ
ಬೆಂಗಳೂರು, ಅ. ೨೦: ಸ್ಯಾಂಡಲ್ವುಡ್ ಪವರ್ ಸ್ಟಾರ್ ದಿ. ಪುನಿತ್ ರಾಜ್ಕುಮಾರ್ಗೆ ನವೆಂಬರ್ ೧ ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪುನಿತ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕುರಿತಂತೆ ಸಭೆ ನಡೆದಿತ್ತು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನಿತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ ಎಂದರು. ನ. ೧ ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ನ. ೧ ರ ನಂತರ ಬೆಂಗಳೂರಿನಲ್ಲಿ ೧೦ ದಿನಗಳ ಅಂತರದಲ್ಲಿ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ರಾಜ್ಕುಮಾರ್ ಕುಟುಂಬದ ಸದಸ್ಯರು ಸಹ ಇಂದಿನ ಸಭೆಯಲ್ಲಿ ಭಾಗಿಯಾಗಿದ್ದರು. ನ. ೧ ರ ಸಂಜೆ ೪ ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯಲಿದೆ ಎಂದರು.
ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಗೆ ಸೇರಿದ ಐವರ ಬಂಧನ!
ಬೆAಗಳೂರು, ಅ. ೨೦: ಪಿಎಫ್ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಮಾತನಾಡಿದ, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ನಿಷೇಧಿತ ಪಿಎಫ್ಐಗೆ ಸೇರಿದ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು. ವಿಚಾರಣೆ ವೇಳೆ ಆರೋಪಿಗಳು ಯಾರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು. ಯಾವ ರೀತಿ ಸಂಚು ರೂಪಿಸಿದ್ದರು ಎಂಬ ವಿಚಾರಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದರು. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಶಾಂತಿಯೂತ ಪ್ರತಿಭಟನೆ ಮಾಡಿದರೆ ನಮ್ಮ ಕಡೆಯಿಂದ ಯಾವುದೇ ಅಡ್ಡಿ ಇರುವುದಿಲ್ಲ. ಕಾನೂನು ಮೀರಿ ಯಾರಾದರು ಪ್ರತಿಭಟನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಪಿಎಫ್ಐ ಸಂಘಟನೆ ನಿಷೇಧವಾಗಿದ್ದರೂ ಅದರ ಕಾರ್ಯಕರ್ತರ ಮೇಲೆ ನಾವು ಕಣ್ಣು ಇಟ್ಟಿದ್ದೇವೆ. ಕರಾವಳಿ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ದಾವಣಗೆರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನಮ್ಮ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲ್ಲಾ ವಿಚಾರಗಳÀನ್ನು ತನಿಖಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ ಎಂದರು. ಪುತ್ತೂರು ಬಿಟ್ಟು ಮತ್ತೆಲ್ಲಿ ತರಬೇತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಅಲೋಕ್ ಕುಮಾರ್ ಹೇಳಿದರು.
ಕರ್ನಾಟಕದ ರಸ್ತೆಗಳ ಸ್ಥಿತಿ ಅತ್ಯಂತ ಕೆಟ್ಟದಾಗಿದೆ: ಸಾವಂತ್
ಪಣಜಿ, ಅ. ೨೦: ರಾಜ್ಯದ ರಸ್ತೆಗಳ ಸ್ಥಿತಿ ಬಗ್ಗೆ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಗೋವಾ ಬಿಜೆಪಿ ಸರ್ಕಾರ ಸಹ ರಸ್ತೆ ವಿಚಾರಕ್ಕೆ ಸಂಬAಧಿಸಿದAತೆ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಬೆಳÀಗಾವಿ ಜಿಲ್ಲೆಯ ರಸ್ತೆಗಳ ದುಸ್ಥಿತಿಗೆ ಸಂಬAಧಿಸಿದAತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ಗೋವಾ ಮತ್ತು ಬೆಳಗಾವಿ ನಡುವೆ ಎಲೆಕ್ಟಿçಕ್ ಶಟಲ್ ಬಸ್ಗಳನ್ನು ಪ್ರಾರಂಭಿಸಲು ಕರ್ನಾಟಕದ ರಸ್ತೆಗಳು ಉತ್ತಮ ಸ್ಥಿತಿಯಲ್ಲಿಲ್ಲ ಎಂದಿದ್ದಾರೆ. ಪಣಜಿಯಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್, ಕರ್ನಾಟಕದ ಭಾಗ, ಗೋವಾ-ರಾಯಚೂರು ರಾಜ್ಯ ಹೆದ್ದಾರಿ ಸಂಖ್ಯೆ ೪ಂನಲ್ಲಿ ಬೆಳಗಾವಿಯವರೆಗೂ ಎಲೆಕ್ಟಿçಕ್ ಸಂಚರಿಸಲು ಯೋಗ್ಯವಾಗಿಲ್ಲ ಎಂದಿದ್ದಾರೆ. ಕರ್ನಾಟಕದ ರಸ್ತೆಗಳ ಸ್ಥಿತಿ ಅತ್ಯಂತ ಕೆಟ್ಟದಾಗಿದೆ ಎಂದ ಸಾವಂತ್, ಈ ಸಮಸ್ಯೆಯನ್ನು ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದೇನೆ. ಮಳೆಗಾಲ ಮುಗಿದ ನಂತರ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಇಂಧನ ವಾಹನಗಳ ಬದಲಿಗೆ ಎಲೆಕ್ಟಿçಕ್ ಬಸ್ ಬಳಸುವ ತಮ್ಮ ಕ್ರಮವನ್ನು ಬೊಮ್ಮಾಯಿ ಶ್ಲಾಘಿಸಿದರು ಎಂದು ಸಾವಂತ್ ತಿಳಿಸಿದ್ದಾರೆ. ಈ ಸಂಬAಧ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಹೈಕೋರ್ಟ್ ಆಯ್ತು, ಜನತೆ ಆಯ್ತು, ಈಗ ಗೋವಾ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳೇ ಕರ್ನಾಟಕದ ರಸ್ತೆಗಳನ್ನು ಟೀಕಿಸುತ್ತಿದ್ದಾರೆ.
ತಾ. ೨೨ ರಂದು ೧೦ ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನಕ್ಕೆ ಚಾಲನೆ
ನವÀದೆಹಲಿ, ಅ. ೨೦: ಪ್ರಧಾನಿ ನರೇಂದ್ರ ಮೋದಿ ಅವರು ತಾ. ೨೨ ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ೧೦ ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ರೋಜ್ಗಾರ್ ಮೇಳದಲ್ಲಿ ಉದ್ಯೋಗಕ್ಕೆ ಆಯ್ಕೆಯಾದ ೭೫,೦೦೦ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ. ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ೩೮ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ೭೫ ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದ್ದು, ನೇಮಕಗೊಂಡವರು ಗ್ರೂಪ್-ಎ, ಗ್ರೂಪ್-ಬಿ (ಗೆಜೆಟೆಡ್), ಗ್ರೂಪ್-ಬಿ (ನಾನ್ ಗೆಜೆಟೆಡ್) ಮತ್ತು ಗ್ರೂಪ್-ಸಿ ನಂತಹ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ. ಈ ನೇಮಕಾತಿಗಳನ್ನು ಸ್ವತಃ ಸಚಿವಾಲಯಗಳು ಮತ್ತು ಇಲಾಖೆಗಳು ಅಥವಾ ಯುಪಿಎಸ್ಸಿ, ಎಸ್ಎಸ್ಸಿ ಮತ್ತು ರೈಲ್ವೇ ನೇಮಕಾತಿ ಮಂಡಳಿಯAತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಿಷನ್ ಮೋಡ್ನಲ್ಲಿ ಆಯ್ಕೆ ಮಾಡಲಾಗುತ್ತಿದೆ.