ಭಾಗಮಂಡಲ, ಅ. ೧೯: ಭಾಗಮಂಡಲದಿAದ ತಲಕಾವೇರಿಯವರೆಗೆ ಸುಮಾರು ಹತ್ತು ಕಿಲೋ ಮೀಟರ್ ದೂರದ ರಸ್ತೆಯಲ್ಲಿ ಇಂದು ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ಸುರಿಯುವ ಮಳೆಯ ನಡುವೆ ತ್ಯಾಜ್ಯಗಳನ್ನು ಸಂಗ್ರಹಿಸಿದರು. ಸ್ವಚ್ಛತಾ ಕಾರ್ಯಕ್ಕೆ ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಮಿತಾ ಇಲ್ಲಿನ ಪ್ರವಾಸಿ ಮಂದಿರದ ಬಳಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್ ಸ್ವಚ್ಛತೆಗೆ ಆದ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂದು ಸ್ವಚ್ಛತೆಯನ್ನು ಸ್ಥಳೀಯ ಸಂಘಟನೆಗಳೊAದಿಗೆ ಭಾಗಮಂಡಲ ತಲಕಾವೇರಿ ಕ್ಷೇತ್ರಗಳಲ್ಲಿ ಮಾಡಲಾಗುತ್ತಿದೆ. ಇದುವರೆಗೆ ತುಲಾ ಸಂಕ್ರಮಣಕ್ಕಿAತ ಮೊದಲು ಸ್ವಚ್ಛತಾ ಕಾರ್ಯ ನಡೆಯುತ್ತಿತ್ತು ತುಲಾ ಸಂಕ್ರಮಣ ಕಳೆದ ಬಳಿಕ ಇದೇ ಮೊದಲ ಬಾರಿಗೆ ಸ್ವಚ್ಛತಾ ಕಾರ್ಯವನ್ನು ಭಾಗಮಂಡಲದಿAದ ಹಮ್ಮಿಕೊಳ್ಳಲಾಗಿದೆ ಎಂದರು.

ಇAದು ನಡೆದ ಸ್ವಚ್ಛತಾ ಕಾರ್ಯದಲ್ಲಿ ಭಾಗಮಂಡಲ ವ್ಯಾಪ್ತಿಯ ಸಂಜೀವಿನಿ ಒಕ್ಕೂಟಗಳ ಸದಸ್ಯರು, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಸದಸ್ಯರು, ಕೊಡಗು ಗೌಡ ಮಹಿಳಾ ಒಕ್ಕೂಟದ ಸದಸ್ಯರು. ಅವಂದೂರಿನ ಗೋಪಾಲಕೃಷ್ಣ ಯುವಕ ಸಂಘದ ಸದಸ್ಯರು, ಅಯ್ಯಂಗೇರಿಯ ವಿನಾಯಕ ಸ್ವಸಹಾಯ ಸಂಘ. ಚರಂಡೇಟಿ ಮಹಿನೀಯರ ಸಂಘ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಎಲ್ಲಾ ಜನಾಂಗದವರು ಪಾಲ್ಗೊಂಡಿದ್ದರು.

ಈ ಸಂದರ್ಭ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಜಿತ್, ಗೌಡ ಸಮಾಜದ ಅಧ್ಯಕ್ಷ ಕುದುಪಜೆ ಪಳಂಗಪ್ಪ, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷ ಕುದುಕುಳಿ ಕಿಶೋರ್, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಪಿ.ಎಂ. ರಾಜೀವ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಾಳನ ರವಿ, ಶಿರಕಜೆ ನಾಗೇಶ್, ನಿತ್ಯಾನಂದ, ವೀಣಾ, ಅಯ್ಯಣಿರ ದಿನೇಶ್, ಶ್ರೀಧರ್ ಚೆಟ್ಟಿಮಾನಿ, ಕೊಡಗು ಗೌಡ ಮಹಿಳಾ ಒಕ್ಕೂಟದ ಅಮೆಮನೆ ದಮಯಂತಿ ಹಾಗೂ ಕೋಳಿಬೈಲು ಹರಿಣಿ ಹಾಗೂ ಸ್ಥಳೀಯರು ಭಾಗವಹಿಸಿದ್ದರು.

- ಸುನಿಲ್