ವೀರಾಜಪೇಟೆ, ಅ. ೨೦: ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಪುರಸಭೆಯ ವ್ಯಾಪ್ತಿಯ ಫಲಾನುಭವಿಗಳಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ನಿವೇಶನ ಹಕ್ಕುಪತ್ರ ವಿತರಿಸಿದರು.
೨೦೨೧-೨೨ನೇ ಸಾಲಿಗೆ ವಾಜಪೇಯಿ ನಗರ ಯೋಜನೆಯಲ್ಲಿ ಅಲ್ಪಸಂಖ್ಯಾತ ಮತ್ತು ಸಾಮಾನ್ಯ ವರ್ಗದ ೩೦ ಫಲಾನುಭವಿಗಳಿಗೆ, ಹಾಗೂ ಡಾ. ಅಂಬೇಡ್ಕರ್ ನಗರ ವಸತಿ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ೧೧ ಪಲಾನುಭವಿಗಳಿಗೆ ಮನೆ ನಿರ್ಮಿಸಲು ಹಕ್ಕುಪತ್ರ ವಿತರಿಸಲಾಯಿತು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಪುರಸಭೆ ಅಧ್ಯಕ್ಷೆ ಸುಶ್ಮಿತಾ, ಉಪಾಧ್ಯಕ್ಷ ವಿನಾಂಕ್ ಕುಟ್ಟಪ್ಪ, ಮುಖ್ಯಾಧಿಕಾರಿ ಚಂದ್ರಕುಮಾರ್, ಪುರಸಭೆಯ ಎಲ್ಲಾ ಸದಸ್ಯರುಗಳು, ಬಿಜೆಪಿ ಪಕ್ಷದ ಪ್ರಮುಖ ರಘು ನಾಣಯ್ಯ, ಮೂಕೊಂಡ ಶಶಿ ಸುಬ್ರಮಣಿ ಸೇರಿದಂತೆ ಇನ್ನಿತರರು ಇದ್ದರು.