ಕೂಡಿಗೆ, ಅ. ೧೯: ಕೂಡಿಗೆ ಸೈನಿಕ ಶಾಲೆಯಲ್ಲಿ ೧೬ನೇ ಶಾಲಾ ಸಂಸ್ಥಾಪನಾ ದಿನ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಮಾತನಾಡಿ, ವಿದ್ಯಾಥಿಗಳು ದೈಹಿಕವಾಗಿ ಸಧೃಡರಾಗುವ ಮೂಲಕ ಸತ್ಪçಜೆಗಳಾಗಬೇಕೆಂದು ಸಲಹೆಯಿತ್ತರು.

ಈ ಸಂದರ್ಭ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಲಾಂಛನ ವನ್ನು ಅನಾವರಣಗೊಳಿಸಲಾಯಿತು. ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ. ಕಣ್ಣನ್, ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಅಜಿತ್ ಸಿಂಗ್, ಉಪಪ್ರಾಂಶುಪಾಲ ಸ್ಕಾ÷್ವ್ವಡ್ರನ್ ಲೀಡರ್ ಮನ್‌ಪ್ರೀತ್ ಸಿಂಗ್, ಶಾಲೆಯ ಹಳೆ ವಿದ್ಯಾರ್ಥಿ ಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.